ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆರು ದಶಕಗಳಿಗೂ ಹೆಚ್ಚನ ಕಾಲದಿಂದ ಶರಾವತಿ ಸಂತ್ರಸ್ಥರ ಬೇಡಿಕೆಯಾಗಿದ್ದ ಅಂಬಾಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆ #Sigandhuru Bridge ಇಂದು ಲೋಕಾರ್ಪಣೆಗೊಳ್ಳುವುದರ ಮೂಲಕ ಐತಿಹಾಸಿಕ ಕ್ಷಣಗಣನೆಗೆ ಸಾಕ್ಷಿಯಾಯಿತು.
ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತೀನ್ ಗಡ್ಕರಿ #Nitin Gadkari ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವುದರ ಮೂಲಕ ನೂತನ ಸೇತುವೆಯನ್ನು ಸಾರ್ವಜನಿಕರಿಗೆ ಅರ್ಪಿಸಿದರು.
ಇದಕ್ಕೂ ಮುನ್ನ ನೂತನ ಸೇತುವೆಯ ಮೇಲೆ ಆಯೋಜಿಸಲಾಗಿದ್ದ ಹೋಮ, ಹವನಗಳಲ್ಲಿ ಭಾಗಿಯಾಗಿ ನಿತಿನ್ ಗಡ್ಕರಿಯವರು ಪೂರ್ಣಾಹುತಿಯಲ್ಲಿ ಫಲ ಇತ್ಯಾದಿ ಸಮರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‍ಜೋಷಿ, #Pralhad Joshi ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, #B S Yadiyurappa ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮೊದಲಾದವರು ಸಚಿವ ಗಡ್ಕರಿಯವರಿಗೆ ಸಾತ್ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ಹರತಾಳು ಹಾಲಪ್ಪ, ಟಿ.ಡಿ. ಮೇಘರಾಜ್, ಪ್ರಸನ್ನ ಕೆರೆಕೈ, ಎಸ್. ದತ್ತಾತ್ರಿ, ಹರಿಕೃಷ್ಣ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post