ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಮುದ್ದಿನಕೊಪ್ಪ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ ಕುಂಸಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆ ಹಿನ್ನೆಲೆ:
ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏತ ನೀರಾವರಿ ಕೆಲಸ ಮಾಡುತ್ತಿದ್ದ ಆದಿತ್ಯ ಕನ್ ಸ್ಟ್ರಕ್ಷನ್ ಕಾರ್ಮಿಕನಿಗೆ ಡಿಕ್ಕಿಯಾದ ಪರಿಣಾಮ ಚಂದ್ರಶೇಖರ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ್ದಿದ್ದು ಬೈಕಿನಲ್ಲಿ ಬರುತ್ತಿದ್ದ ಸವಾರನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.


ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೂ ತೀವ್ರ ಗಾಯಗಳಾಗಿದ್ದು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















