No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭ | ಕೇಂದ್ರ ಸಚಿವ ಮುರುಗನ್

kalpa News by kalpa News
January 23, 2025
in ಶಿವಮೊಗ್ಗ
0
ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭ | ಕೇಂದ್ರ ಸಚಿವ ಮುರುಗನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ #Bhadravathi Akashavani ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ ಒದಗಿಸಿಕೊಟ್ಟು, ಅತ್ಯಲ್ಪ ಅವಧಿಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್. ಮುರುಗನ್ #Minister Murugan ಅವರು ಹೇಳಿದರು.

ಅವರು ಇಂದು ನಗರದ ಎಂ.ಆರ್.ಎಸ್.ಸಮೀಪದಲ್ಲಿರುವ ದೂರದರ್ಶನ ಮರುಪ್ರಸಾರ ಕೇಂದ್ರದಲ್ಲಿ ಎಫ್.ಎಂ.ರೇಡಿಯೋ ಆರಂಭಿಸಲು ಕೆನಡಾದಿಂದ ತರಿಸಲಾಗಿದ್ದ ಅತ್ಯಧಿಕ ತರಂಗಾಂತರಗಳನ್ನು ಸೂಸುವ ಟ್ರಾನ್ಸ್‍ಮೀಟರ್ ಅಳವಡಿಕೆ ಹಾಗೂ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡು, ನಂತರ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ದೇಶದ ಎಲ್ಲಾ ಆಕಾಶವಾಣಿ ಕೇಂದ್ರಗಳನ್ನು ಜನರ ಆಶೋತ್ತರಗಳಿಗೆ ಪೂರಕವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಕಳೆದ ಸಾಲಿನಲ್ಲಿ 2500ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಮೂಲಭೂತ ಸೌಲಭ್ಯಗಳೊಂದಿಗೆ ಅತ್ಯಾಧುನಿಕ ತಂತ್ರಾಂಶಗಳನ್ನು ಅಳವಡಿಸಿದೆ ಎಂದ ಅವರು, ಪ್ರಸ್ತುತ ರಾಜ್ಯದ ಕೋಲಾರ, ರಾಣೆಬೆನ್ನೂರು, ಬೀದರ್ ಮತ್ತು ಉಡುಪಿ ಜಿಲ್ಲೆಗಳಿಗೂ ಅತ್ಯಧಿಕ ತರಂಗಾಂತರಗಳನ್ನು ಸೂಸುವ ಟ್ರಾನ್ಸ್‍ಮೀಟರ್‍ಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಆಕಾಶವಾಣಿ ಕೇಂದ್ರಗಳನ್ನು ಇನ್ನಷ್ಟು ಸಮರ್ಥವಾಗಿ ಕಾರ್ಯನಿರ್ವಹಿಸಲಿವೆ ಎಂದರು.

ಆಕಾಶವಾಣಿಯು ಈ ದೇಶದ ಸಾಂಪ್ರದಾಯಿಕ, ಕಲೆ, ಸಾಹಿತ್ಯ, ಸಂಗೀತವನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಮಹತ್ವ ಕಾರ್ಯನಿರ್ವಹಿಸುತ್ತಿದೆ ಮಾತ್ರವಲ್ಲ ಸ್ಥಳೀಯ ಕಲಾವಿದರಿಗೆ ವೇದಿಕೆಗಳನ್ನು ಒದಗಿಸಿ, ಅವರ ಕಲೆಯನ್ನು ಜಗತ್ತಿಗೆ ಪರಿಚಯಿಸುವ ಕಾರ್ಯದಲ್ಲಿ ಸಕ್ರಿಯವಾಗಿದೆ. ಇದರೊಂದಿಗೆ ಇಂದಿನ ಜನಾಂಗಕ್ಕೆ ಪೂರಕವಾದ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಸಾರಗೊಳಿಸಲು ಆಕಾಶವಾಣಿ ಬದ್ದವಾಗಿದೆ. ದೂರದ ಗುಡ್ಡ-ಬೆಟ್ಟ ಪ್ರದೇಶಗಳಲ್ಲಿಯೂ ಆಕಾಶವಾಣಿ ತನ್ನ ಇರುವಿಕೆಯನ್ನು ಮತ್ತೆಮತ್ತೆ ಪರಿಚಯಿಸಲಿದೆ ಎಂದರು.

Also read: ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

ಇಲ್ಲಿನ ಕ್ರಿಯಾಶೀಲ ಸಂಸದ ಬಿ.ವೈ.ರಾಘವೇಂದ್ರ ಅವರ ಒತ್ತಾಸೆಯಂತೆ ಎಫ್.ಎಂ.ರೇಡಿಯೋ ಕೇಂದ್ರವನ್ನು ಅಭಿವೃದ್ಧಿಪಡಿಸಲು ಅಗತ್ಯ ಸಹಕಾರವನ್ನು ನೀಡಲಾಗುವುದು. ಅವರ ಜನಪರ ಕಳಕಳಿಯಂತೆ ಸಾಮಾನ್ಯವೆನಿಸುವ ಕಾರ್ಯಗಳನ್ನು ನಿರ್ಲಕ್ಷಿಸದೇ ಕೈಗೆತ್ತಿಕೊಳ್ಳುವ ಅವರ ಸ್ವಭಾವ ಪ್ರಶಂಸನೀಯವಾದುದು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಪ್ರಸ್ತುತ ಭದ್ರಾವತಿ ಕೇಂದ್ರದಲ್ಲಿ 1ಕಿ.ವ್ಯಾ. ಸಾಮಥ್ರ್ಯದ ಟ್ರಾನ್ಸ್‍ಮೀಟರನ್ನು ಅಳವಡಿಸಲಾಗಿದೆ. ನಗರದ ಈ ನೂತನ ಪ್ರಸಾರ ಕೇಂದ್ರದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಕೆನಡಾದಿಂದ 10ಕಿ.ವ್ಯಾ. ಸಾಮಥ್ರ್ಯದ ಟ್ರಾನ್ಸ್‍ಮೀಟರ್‍ನ್ನು ಅಳವಡಿಸಲಾಗುತ್ತಿದ್ದು, ಸುಮಾರು 100ಕಿ.ಮೀ. ಪ್ರದೇಶದ ವ್ಯಾಪ್ತಿಯವರೆಗೆ ಯಾವುದೇ ಡಾಟಾ ಕೇಬಲ್‍ಗಳ ಸಹಾಯವಿಲ್ಲದೇ ರೇಡಿಯೋವನ್ನು ಆಲಿಸಬಹುದಾಗಿದೆ ಅಲ್ಲದೇ ತಮ್ಮ ಮೊಬೈಲ್‍ನಲ್ಲಿಯೂ ಎಫ್.ಎಂ. ಕಾರ್ಯಕ್ರಮಗಳನ್ನು ಕೇಳಬಹುದಾಗಿದೆ. ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಎಫ್.ಎಂ.ಆರಂಭಗೊಳ್ಳುತ್ತಿರುವುದು ಶುಭ ಸಂಕೇತ ಎಂದರು.
ಆಕಾಶವಾಣಿ ನಾಡಿನ ಸುದ್ದಿಗಳನ್ನು ಮಾತ್ರವಲ್ಲದೇ ಮನೋರಂಜನಾ ಮಾಧ್ಯಮವಾಗಿಯೂ ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಜನರ ಸಂಪರ್ಕ ಮಾಧ್ಯಮವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಸಾರ ಮಾಡುವ ಮೂಲಕ ಪರಿಚಿತವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಡಿ.ಎಸ್.ಅರುಣ್, ಮಾಜಿ ಶಾಸಕ ಕೆ.ಬಿ.ಅಶೋಕನಾಯ್ಕ್, ಆಕಾಶವಾಣಿ ವಿಭಾಗೀಯ ಮುಖ್ಯಸ್ಥ ಸಂಜೀವ್, ಉಪನಿರ್ದೇಶಕ ಡಾ.ರಘು, ಕಾರ್ಯಕ್ರಮ ಸಂಯೋಜಕ ಸುಬ್ರಾಯಭಟ್ ಸೇರಿದಂತೆ ಆಕಾಶವಾಣಿಯ ಅಧಿಕಾರಿ-ಸಿಬ್ಬಂಧಿಗಳು, ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: Bhadravathi AkashavaniKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister MuruganNews_in_KannadaNews_KannadaShimogaShivamoggaNewsಭದ್ರಾವತಿ ಆಕಾಶವಾಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಕರ್ನಾಟಕದಲ್ಲಿ ನಾಲ್ಕು ಆಕಾಶವಾಣಿ ಕೇಂದ್ರ ಮೇಲ್ದರ್ಜೆಗೆ : ಕೇಂದ್ರ ಸಚಿವ ಮುರುಗನ್

Next Post

ಶಿವಮೊಗ್ಗ | ಮುರುಳಿ, ಶಶಿರಾಜ್ ಗೆ ಕುವೆಂಪು ವಿವಿ ಪಿಹೆಚ್’ಡಿ ಪ್ರದಾನ

kalpa News

kalpa News

Next Post
ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಶಿವಮೊಗ್ಗ | ಮುರುಳಿ, ಶಶಿರಾಜ್ ಗೆ ಕುವೆಂಪು ವಿವಿ ಪಿಹೆಚ್'ಡಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL