ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲವಗೊಪ್ಪದ ಭಗತ್ ಸಿಂಗ್ ಕನ್ನಡ ಯುವಕರ ಸಂಘದ ವತಿಯಿಂದ ತಾಯಿ ಭುವನೇಶ್ವರಿಯ ರಾಜಬೀದಿ ಉತ್ಸವ ನಡೆಸಿ, ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ನಟ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸಲಾಯಿತು.
ಮಲವಗೊಪ್ಪದ ಚನ್ನಬಸವ ದೇವಸ್ಥಾನದ ಆವರಣದಲ್ಲಿ ಸ್ಥಳೀಯ ಮುಖಂಡರಿಂದ ಧ್ವಜಾರೋಹಣ ನೆರವೇರಿಸಿ, ಡೊಳ್ಳು, ನಂದಿಕೋಲು ಸೇರಿದಂತೆ ವಿವಿಧ ಕಲಾತಂಡಳೊಂದಿಗೆ ಪ್ರಮುಖ ಬೀದಿಗಳಲ್ಲಿ ಭುವನೇಶ್ವರಿ ತಾಯಿಯ ಮೆರವಣಿಗೆ ನಡೆಸಲಾಯಿತು.
ಸಂಜೆ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಲವಗೊಪ್ಪದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬಿ.ಹೆಚ್. ರಸ್ತೆಯ ವಿಭಜಕದ ಮೇಲೆ ತಾಯಿ ಭುವನೇಶ್ವರಿ ಮತ್ತು ನಟ ಪುನೀತ್ ರಾಜಕುಮಾರ್ ಅವರ ಭಾವಚಿತ್ರದ ಫ್ಲೆಕ್ಸ್ಗಳು ರಾರಾಜಿಸುತ್ತಿತ್ತು. ವೇದಿಕೆ ಮೇಲೆ ಹಾಕಲಾಗಿದ್ದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕರ್ನಾಟಕದ ಐತಿಹಾಸಿಕ ಸ್ಥಳಗಳ ಭಾವಚಿತ್ರಗಳು ಹಲವರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಮಲವಗೊಪ್ಪದ ಯುವಕರು ಗ್ರಾಮಸ್ಥರು, ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post