ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಟೋ ಚಾಲಕರೊಬ್ಬರು ಲಕ್ಷಾಂತರ ರೂ. ಬೆಲೆ ಬಾಳುವ ಆಭರಣವನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಘಟನೆ ಹಿನ್ನೆಲೆ:
ಮಹಿಳೆಯೋರ್ವರು ಆಭರಣವಿದ್ದ ಬ್ಯಾಗನ್ನು ಆಟೋದಲ್ಲಿ ಬಿಟ್ಟು ಹೋಗಿದ್ದು, ಇದನ್ನು ಗಮನಿಸಿದ ಆಟೋ ಚಾಲಕ ಮೊಹಮ್ಮದ್ ಗೌಸ್ ಅದರಲ್ಲಿದ್ದ ವಿಳಾಸದ ಆಧಾರದ ಮೇಲೆ ಆಭರಣವನ್ನು ಅದರ ವಾರಸುದಾರರಿಗೆ ಸುರಕ್ಷಿತವಾಗಿ ಹಿಂತಿರುಗಿಸಿದ್ದಾರೆ.
2.20ಲಕ್ಷ ರೂ. ಮೌಲ್ಯದ ಆಭರಣವನ್ನು ವಾರಸುದಾರರಿಗೆ ಹಿಂತಿರುಗಿಸಿದ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಪ್ರಾಮಾಣಿಕತೆಗೆ ಮೆಚ್ಚಿ ಪ್ರಶಂಸನಾ ಪತ್ರವನ್ನು ನೀಡಿದ್ದಾರೆ.
Also read: ಹಿಂದೂಗಳಿಗೆ ಅತಿದೊಡ್ಡ ವಿಜಯ: ಮಹಿಳೆಯರ ಅರ್ಜಿ ವಿಚಾರಣೆಗೆ ಅರ್ಹ, ಮುಸ್ಲಿಂ ಅರ್ಜಿದಾರರಿಗೆ ಹಿನ್ನಡೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















