ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ತಾವು ಮೂರು ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾ ಕಚೇರಿಯಲ್ಲಿಂದು ಮಾತನಾಡಿದ ಅವರು, ಮತದಾನಕ್ಕೆ 11 ದಿನ ಭಾಕಿ ಉಳಿದಿದೆ. ಈಗಾಗಲೇ 10 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಮುಗಿಸಿದ್ದೇವೆ. ಪ್ರತೀ ಪಂಚಾಯತ್‌ನಲ್ಲೂ ಕಾರ್ಯ ಪ್ರಮುಖ್ ನೇಮಿಸಲಾಗಿದೆ. ಇನ್ನುಳಿದ ದಿನಗಳಲ್ಲಿ ಪ್ರತೀ ಪಂಚಾಯತಿ ಸದಸ್ಯರನ್ನು ಸಂಪರ್ಕಿಸುತ್ತೇವೆ. ಈಗಾಗಲೇ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಭಾರೀ ಅಂತರದಲ್ಲಿ ಗೆಲುವು ಸಾಧಿಸುತ್ತೇವೆ ಎಂದರು.
ನಮಗೆ ಬೆನ್ನುಲುಬಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿಂತಿದ್ದು, ೨೫ ಕ್ಷೇತ್ರದಲ್ಲಿ ಕನಿಷ್ಟ 20 ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಅವರು ಪಣ ತೊಟ್ಟಿದ್ದಾರೆ. ಇದಕ್ಕಾಗಿ ಅವರು, ನಿರಂತರವಾಗಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದು, ಈ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವು ನಿಶ್ಚಿತ ಎಂದರು.
ಸುದ್ಧಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಕಾಡಾ ಅಧ್ಯಕ್ಷ ಪವಿತ್ರಾ ರಾಮಯ್ಯ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ದತ್ತಾತ್ರಿ, ಪ್ರಮುಖರಾದ ಹೃಷಿಕೇಶ್ ಪೈ, ಎನ್.ಜಿ. ನಾಗರಾಜ್, ಕೆ.ವಿ. ಅಣ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅರುಣ್ ನೀಡಿದ ಆಶ್ವಾಸನೆಗಳೇನು?
- ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು
- ಡಿಜಿಟಲೈಸೇಷನ್ ಮೂಲಕ ಜನನ ಮತ್ತು ಮರಣ ಪತ್ರವನ್ನು ಗ್ರಾಮಪಂಚಾಯತ್‌ನಲ್ಲೇ ನೀಡಲು ವ್ಯವಸ್ಥೆ
- ಸಂಧ್ಯಾಸುರಕ್ಷಾ, ಅಂತ್ಯೋದಯ ಸೇರಿ ವಿವಿಧ ಯೋಜನೆಗಳನ್ನು ಗ್ರಾಮಮಟ್ಟದಲ್ಲಿಯೇ ಜಾರಿಗೆ ತರಲು ಯತ್ನ
- ಆದರ್ಶ ಗ್ರಾಮ, ಬಗರ್‌ಹುಕುಂ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ
- ಸೀಟಿಂಗ್ ಶುಲ್ಕ 2000ರೂ.ಗೆ ಏರಿಕೆ
- ಗ್ರಾಮಮಟ್ಟದಲ್ಲಿ ಆರೋಗ್ಯ ಕಾರ್ಡ್ ವಿತರಣೆಗೆ ಪ್ರಯತ್ನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post