ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ಜುಲೈ 12ರ ಸೋಮವಾರ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜುಲೈ 12ರಂದು ಬೆಳಗ್ಗೆ 11ಗಂಟೆಯಿಂದ 12:30ರವರೆಗೆ ಎಲ್ಲಾ 6 ವಿಷಯಗಳ (ಕನ್ನಡ ಪ್ರಥಮ ಭಾಷೆ, ಇಂಗ್ಲಿಷ್ ದ್ವಿತೀಯ ಭಾಷೆ, ಹಿಂದಿ ತೃತೀಯ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ) ನೇರ ಫೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮಕ್ಕಳು ಪ್ರಶ್ನೆಕೇಳಿ, ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದು. ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು: 08282-270282, 08282274900.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post