ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಆಲ್ಕೋಳ ಅಗಮುಡಿ ಕಲ್ಯಾಣ ಮಂಟಪದ ಸಮೀಪದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಗಳು ಸಕಾಲದಲ್ಲಿ ರಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ.
ಪ್ರಕರಣದ ವಿವರ
ಆಲ್ಕೋಳ ಅಗಮುಡಿ ಕಲ್ಯಾಣ ಮಂಟಪದ ಸಮೀಪದಲ್ಲಿರುವ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್ ಮೂಲಕ ಸಂತೋಷ (46) ಎಂಬ ವ್ಯಕ್ತಿ ತಿಳಿಸಿದ್ದಾನೆ. ಈ ಸಂದರ್ಭದಲ್ಲಿ ಗಾಬರಿಗೊಂಡ ಸಂಬಂಧಿಕರು 112 ERV -2 ಗೆ ಮಾಹಿತಿ ನೀಡಿದ್ದಾರೆ.112 ಕರೆಯಾದ ಕಾರಣ ಕರ್ತವ್ಯದಲ್ಲಿದ್ದ ವಿನೋಬನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಗದೀಶ್ ಹಾಗೂ ಚಾಲಕ ಮಂಜುನಾಥ್ ಮಾಹಿತಿಯನ್ನು ಸಂಗ್ರಹಿಸಿಕೊಂಡು ವ್ಯಕ್ತಿಯ ಮನೆಗೆ ತೆರಳಿ ಮನೆಯ ಬಾಗಿಲನ್ನು ತೆರೆದು ವ್ಯಕ್ತಿಗೆ ಧೈರ್ಯ ತುಂಬಿ, ಮನವರಿಕೆ ಮಾಡುವ ಮೂಲಕ ಜೀವಕ್ಕೆ ಯಾವುದೇ ಅಪಾಯವಾಗದಂತೆ ತಡೆದು ಜೀವವನ್ನು ರಕ್ಷಿಸಿದ್ದಾರೆ.
ಈ ಸಂದರ್ಭದಲ್ಲಿ ತುಂಗಾ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರಭು, ಕಿರಣ ಅವರೂ ಸಹ ಹಾಜರಿದ್ದರು.
ಪೊಲೀಸ್ ಸಿಬ್ಬಂದಿಗಳ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post