ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಾಕಿಂಗಿಗೆ ಎಂದು ತೆರಳಿದ ವ್ಯಕ್ತಿ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ನಿವೃತ್ತ ಎಎಸ್‌ಐ ಮುಷ್ತಾಕ್ ಅಹ್ಮದ್ ಮೃತ ವ್ಯಕ್ತಿಯಾಗಿದ್ದು, ಸೀಗೆಹಟ್ಟಿಯಲ್ಲಿ ವಾಸವಾಗಿದ್ದ ಮುಷ್ತಾಕ್ ಅಹಮದ್ ಎಂದಿನಂತೆ ವಾಕಿಂಗಿಗೆ ಹೋಗಿದ್ದರು. ಆದರೆ ಅವರು ವಾಕಿಂಗ್ ಮುಗಿಸಿ ಮನೆಗೆ ಹಿಂದಿರುಗದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಅವರಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದರು. ಬಳಿಕ ಅವರ ಶವ ತುಂಗಾ ಸೇತುವೆ ಬಳಿ ಪತ್ತೆಯಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇದು ಆತ್ಮಹತ್ಯೆಯೇ, ಕೊಲೆಯೋ ಅಥವಾ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎಂಬುವುದನ್ನು ಇನ್ನಷ್ಟೇ ಸ್ಪಷ್ಟಪಡಿಸಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post