ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರಿನ ನಿವಾಸಿಯೊಬ್ಬರನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಇಟ್ಟಮಡು ಏರಿಯಾದ ನಿವಾಸಿ ವಿಗ್ನೇಶ್ (62) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕೋಟೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 99/1989 ರ ಐಪಿಸಿ ಕಲಂ 324, 326 ಸಹಿತ 34ರ ಅಡಿ ಆರೋಪಿಯಾಗಿದ್ದರು.
ಇವರು ಕಳೆದ 33 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಈ ಸಂಬಂಧ ಶಿವಮೊಗ್ಗದ ಪಿಸಿಜೆ ಮತ್ತು ಸಿಜೆಎಂ ನ್ಯಾಯಾಲಯವು ಎಲ್’ಪಿಆರ್ ಸಂಖ್ಯೆ 13/1993 ರಲ್ಲಿ ಆರೋಪಿ ವಿರುದ್ದ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ಕೋಟೆ ಠಾಣೆ ಪಿಐ ಹರೀಶ್ ಕೆ ಪಟೇಲ್ ನೇತೃತ್ವದಲ್ಲಿ ಪಿಎಸ್‌ಐ ಸಂತೋಷ್ ಭಾಗೋಜಿ, ಹೆಚ್ ಸಿ ಗಳಾದ ಧನಂಜಯ್, ಚಂದ್ರುರವರು ಆರೋಪಿಯನ್ನು ಬಂಧಿಸಿ, 4/4/2026 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















