ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಡೆಂಗ್ಯೂ ಭೀತಿಯ ನಡುವೆಯೇ ಝಿಕಾ ವೈರಸ್ ಸಹ ಆತಂಕ ಮೂಡಿಸಿದ್ದು, ಈ ಸೋಂಕಿಗೆ ನಗರದಲ್ಲಿ ಓರ್ವ ಹಿರಿಯ ವ್ಯಕ್ತಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಝಿಕಾ ವೈರಸ್’ಗೆ #Zika Virus ತುತ್ತಾಗಿದ್ದ ಗಾಂಧಿ ನಗರದ 74 ವರ್ಷದ ವೃದ್ದರೊಬ್ಬರು ಅದರಿಂದ ಗುಣಮುಖರಾಗಿ ಮನಗೆ ಹಿಂದಿರುಗಿದ್ದರು. ಅದರೂ ಮನೆಯಲ್ಲಿ ವಿಶ್ರಾಂತಿ ಪಡೆಯುವ ವೇಳೆಯೇ ಅವರು ಮೃತಪಟ್ಟಿದ್ದರು ಎಂದು ಹೇಳಲಾಗಿದೆ.
Also read: ಸ್ವಚ್ಛತೆ ಮರೀಚಿಕೆಯಾದ ಶಿವಮೊಗ್ಗ ಪಾಸ್ ಪೋರ್ಟ್ ಕಛೇರಿ
ಜೂನ್ 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್21 ರಂದು ನಡೆಸಿದ್ದ ರಕ್ತ ಪರೀಕ್ಷೆಯಲ್ಲಿ ಝಿಕಾ ವೈರಸ್ ಪತ್ತೆ ಆಗಿತ್ತು. ಬಳಿಕ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕುಟುಂಬಸ್ಥರು ಗುರುವಾರ ಅವರನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದರು. ತೀವ್ರ ಆರೋಗ್ಯ ಸಮಸ್ಯೆಯಿಂದ ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಜ್ವರ ಮಾತ್ರವಲ್ಲದೇ ಬೇರೆ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಇದೇ ವೇಳೆ ಸಾಗರದ ಯುವಕನೊಬ್ಬನಿಗೂ ಸೋಂಕು ಪತ್ತೆಯಾಗಿದ್ದು, ಖಚಿತ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post