ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾವರ್ಕರ್ ಫ್ಲೆಕ್ಸ್ ತೆರವಿಗೆ ಸಂಬಂಧಿಸಿದಂತೆ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗಿದೆ.
ಗಾಂಧಿಬಜಾರ್‌ನ ಬಟ್ಟೆ ಅಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರೇಮ್ ಕುಮಾರ್ (22) ಎಂಬ ಯುವಕನಿಗೆ ಅನ್ಯ ಕೋಮಿನ ಯುವಕರು ಉಪ್ಪಾರ ಕೇರಿ ಸಮೀಪ ಚಾಕುವಿನಿಂದ ಇರಿದಿದ್ದಾರೆ ಎಂದು ವರದಿಯಾಗಿದೆ.
ಈತನಿಗೆ ಮೆಗ್ಗಾನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಆದರೆ ಈ ಘಟನೆಯನ್ನು ಪೊಲೀಸ್ ಅಧಿಕಾರಿಗಳು ಖಚಿತ ಪಡಿಸಿಲ್ಲವಾದ್ದರಿಂದ ಫ್ಲೆಕ್ಸ್ ವಿಚಾರದಲ್ಲಿ ಉಂಟಾದ ಗಲಾಟೆಯ ಭಾಗ ಎಂದು ಹೇಳಲಾಗದು.
Also read: ಸಾವರ್ಕರ್ ಫ್ಲೆಕ್ಸ್ ವಿವಾದ: ಶಿವಮೊಗ್ಗ ನಗರದಲ್ಲಿ ಎರಡು ದಿನ 144 ಸೆಕ್ಷನ್ ಜಾರಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















