No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಯಕದಲ್ಲಿ ಪ್ರಾಮಾಣಿಕತೆ ಹೊಂದಿರುವ ವ್ಯಕ್ತಿ ನಿರೀಕ್ಷಿತ ಗುರಿ ತಲುಪಲು ಸಾಧ್ಯ

ಕಿಮ್ಮನೇ ಗಾಲ್ಫ್ ರೆಸಾರ್ಟ್‌ನ ವ್ಯವಸ್ಥಾಪಕ ಜಯರಾಮ್ ಜಿ ಕಿಮ್ಮನೆ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 30, 2022
in ಶಿವಮೊಗ್ಗ
0
ಕಾಯಕದಲ್ಲಿ ಪ್ರಾಮಾಣಿಕತೆ ಹೊಂದಿರುವ ವ್ಯಕ್ತಿ ನಿರೀಕ್ಷಿತ ಗುರಿ ತಲುಪಲು ಸಾಧ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿಸ್ತು, ಬದ್ಧತೆ, ಕಾಯಕದಲ್ಲಿ ಪ್ರಾಮಾಣಿಕತೆ ಹೊಂದಿರುವ ಯಾವುದೇ ವ್ಯಕ್ತಿ ನಿರೀಕ್ಷಿತ ಗುರಿ ತಲುಪಲು ಸಾಧ್ಯ ಎಂದು ಕಿಮ್ಮನೇ ಗಾಲ್ಫ್ ರೆಸಾರ್ಟ್‌ನ ವ್ಯವಸ್ಥಾಪಕ ಜಯರಾಮ್ ಜಿ ಕಿಮ್ಮನೆ Jayaram G Kimmane ಅವರು ಹೇಳಿದರು.

ಅವರು ಇಂದು ಪ್ರೇರಣಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಪೂರ್ಣಗೊಳಿಸಿ, ಕ್ಯಾಂಪಸ್ ಸೆಲೆಕ್ಷನ್‌ನಲ್ಲಿ ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶದ ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳು ಈ ದೇಶದ ಭವಿಷ್ಯ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು. ಶಿಕ್ಷಣವಿಲ್ಲದ ವ್ಯಕ್ತಿಯಿಂದ ದೇಶದ ಭವಿಷ್ಯ ನಿರ್ಧರಿಸುವುದು ಕಷ್ಟಸಾಧ್ಯ ಮಾತ್ರವಲ್ಲ ತನ್ನ ಕೌಟುಂಬಿಕ ಬೆಳವಣಿಗೆಯೂ ಸಾಧ್ಯವಾಗದು ಎಂದರು.
ವಿದ್ಯಾರ್ಥಿಯ ಗುರಿ ಖಚಿತವಾಗಿದ್ದು, ಮಾಡುವ ಚಿಂತನೆಗಳು ಸಕಾರಾತ್ಮಕವಾಗಿದ್ದಾಗ ನಿರೀಕ್ಷಿತ ಕೆಲಸ-ಕಾರ್ಯಗಳಲ್ಲಿ ಸಹಜವಾಗಿ ಗೆಲುವು ಸಾಧ್ಯವಾಗಲಿದೆ. ವ್ಯಕ್ತಿ ಪ್ರಾಮಾಣಿಕವಾಗಿದ್ದಾಗ ಸೋಲು ತಾತ್ಕಾಲಿಕವಾಗಿರಲಿದೆ. ಗೆಲವು ಖಚಿತವಾಗಿರಲಿದೆ. ಈ ವಿಷಯದಲ್ಲಿ ಎಲ್ಲರೂ ನಂಬಿಕೆ ಹೊಂದಿರಬೇಕು. ತಮ್ಮ ವ್ಯಾವಹಾರಿಕ ಬೆಳವಣಿಗೆಯಲ್ಲಿನ ಘಟನಾವಳಿಗಳನ್ನು ಹಂಚಿಕೊಂಡರು. ತಮ್ಮ ಬೆಳವಣಿಗೆಯಲ್ಲಿ ಎಲ್ಲ ರೀತಿಯಲ್ಲೂ ಪ್ರೋತ್ಸಾಹಿಸಿದ ಪೋಷಕರನ್ನು ಗೌರವದಿಂದ ಕಾಣುವಂತೆ ಸಲಹೆ ನೀಡಿದರು.

ಸಂಸದ ಹಾಗೂ ಪ್ರೇರಣಾ ಟ್ರಸ್ಟ್‌ನ ವ್ಯವಸ್ಥಾಪಕ ಬಿ.ವೈ. ರಾಘವೇಂದ್ರ MP B Y Raghavendra ಮಾತನಾಡಿ, ದಶಕಗಳ ಹಿಂದೆ ಕೇವಲ ಮೆಟ್ರೋ ಪಾಲಿಟಿನ್ ಸಿಟಿಗಳು, ನಂ. 01 – 02 ಸಿಟಿಗಳಿಗೆ ಮಾತ್ರ ಸೀಮಿತವಾಗಿದ್ದ ಅರ್ಹ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಇಂತಹ ಸದವಕಾಶಗಳು ಶಿವಮೊಗ್ಗ ಜಿಲ್ಲಾ ಕೇಂದ್ರಗಳಿಗೂ ಇಂದು ಸಾಧ್ಯವಾಗಿದೆ. ಪ್ರೇರಣಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ 651ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ದೇಶದ 75ಕ್ಕೂ ಹೆಚ್ಚಿನ ಪ್ರತಿಷ್ಠಿತ ಔದ್ಯೋಗಿಕ ಸಂಸ್ಥೆಗಳಲ್ಲಿ, ಅತ್ಯಂತ ಹೆಚ್ಚಿನ ವೇತನ ಶ್ರೇಣಿಯ ಉದ್ಯೋಗಾವಕಾಶಗಳು ಮಲೆನಾಡಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒದಗಿ ಬಂದಿದೆ. ಇವರಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಉನ್ನತ ಶ್ರೇಣಿಯ ಉದ್ಯೋಗ ದೊರೆತಿರುವುದು ಹರ್ಷದ ಸಂಗತಿಯಾಗಿದೆ. ಈ ಯಶಸ್ಸಿನ ಹಿಂದೆ ಶ್ರಮಿಸಿದ ಶಿಕ್ಷಣ ಸಂಸ್ಥೆಯ ಸಿಬ್ಬಂಧಿಗಳು, ಉದ್ಯೋಗದಾತರು ಹಾಗೂ ಈ ಸಂದರ್ಭದಲ್ಲಿ ಉದ್ಯೋಗಾವಕಾಶಕ್ಕೆ ಅರ್ಹರಾದ, ಸಂಸ್ಥೆಯ ಹಾಗೂ ನಗರದ ಕೀರ್ತಿ ಹೆಚ್ಚಿಸಿದ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದರು.

ಜಿಲ್ಲೆಯ ಶೈಕ್ಷಣಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 650ಕ್ಕೂ ಹೆಚ್ಚಿನ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಒದಗಿ ಬಂದಿರುವುದು ಹರ್ಷದಾಯಕ. ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂಧಿಗಳ ಸಂಘಟಿತ ಪ್ರಯತ್ನ ಯಶಸ್ಸಿನ ಗುಟ್ಟು.
ಪ್ರಸನ್ನಕುಮಾರ್, ಉದ್ಯೋಗ ಮಾರ್ಗದರ್ಶಕರು. ಪ್ರೇರಣಾ ಸಂಸ್ಥೆ

ಪಿಇಎಸ್ ಟ್ರಸ್ಟ್‌ನ ಕೆರಿಯರ್ ಡೆವ¯ಪ್‌ಮೆಂಟ್ ಸೆಂಟರ್ ವಿದ್ಯಾರ್ಥಿಗಳಿಗಾಗಿ ಇದುವರೆಗೆ 150ಕ್ಕೂ ಹೆಚ್ಚಿನ ಪ್ಲೇಸ್‌ಮೆಂಟ್ ಡ್ರೈವ್‌ಗಳನ್ನು ಏರ್ಪಡಿಸಿದೆ. ಇದುವರೆಗೆ ದೇಶದ ಪ್ರತಿಷ್ಠಿತ 75 ಕಂಪನಿಗಳು ವಿದ್ಯಾರ್ಥಿಗಳಿಗೆ ಉದ್ಯೋಗಗಳನ್ನು ನೀಡಿವೆ.
ಡಾ. ನಾಗರಾಜ್

ಉದ್ಯೋಗಾವಕಾಶವನ್ನು ಪಡೆದವರಲ್ಲಿ ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳಲ್ಲದೇ ತಾಂತ್ರಿಕೇತರ ಶಿಕ್ಷಣ ಪಡೆದ ಕೆಲ ವಿದ್ಯಾರ್ಥಿಗಳು ಇರುವುದು ಹೆಮ್ಮೆ ಎನಿಸಿದೆ. ವಿಶ್ವದ ಕೆಲವು ರಾಷ್ಟ್ರಗಳಲ್ಲಿ ಆರ್ಥಿಕ ಅಸಮತೋಲನ ಮತ್ತು ಕೆಲವು ರಾಷ್ಟçಗಳ ನಡುವಿನ ಯುದ್ಧದ ಕರಾಳ ಛಾಯೆಯಂತಹ ಸಂದಿಗ್ಧ ಸಂದರ್ಭದಲ್ಲೂ ದೇಶದ ಅನೇಕ ಪ್ರತಿಷ್ಠಿತ ಕಂಪನಿಗಳಲ್ಲಿ ಅರ್ಹರಿಗೆ ಉದ್ಯೋಗಾವಕಾಶಗಳು ದೊರೆಯುತ್ತಿರುವುದು, ದೇಶವಾಸಿಗಳೆಲ್ಲರಿಗೂ ಸಕಾಲಿಕ ಆಹಾರ ಸಾಮಗ್ರಿಗಳ ವಿತರಣೆ ಲಭಿಸುತ್ತಿರುವುದು ದೇಶದ ಸಾಧನೆಗಳಲ್ಲೊಂದು. ವಿಶ್ವದ ಹಲವು ರಾಷ್ಟಗಳು ಈ ದೇಶದೊಂದಿಗೆ ಸೌಹಾರ್ಧ ಸಂಬಂಧ ಹೊಂದಲು ಹಂಬಲಿಸುತ್ತಿರುವಂತೆ ಮಾಡಿರುವ ಹಾಗೂ ದೇಶದ ನೇತೃತ್ವ ವಹಿಸಿರುವ ಪ್ರಧಾನಮಂತ್ರಿಗಳೂ ಕೂಡ ಅಭಿನಂದನಾರ್ಹರು ಎಂದರು.

Also read: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಇಂದು ಪ್ರಮಾಣವಚನ ಸ್ವೀಕಾರ

ಇಷ್ಟೇ ಅಲ್ಲದೇ ದೇಶದ ಇನ್ನೂ ಹಲವು ಪ್ರತಿಷ್ಠಿತ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸುವ ಕಾರ್ಯ ಪ್ರಗತಿಯಲ್ಲಿದ್ದು, ಇನ್ನಷ್ಟು ಪ್ರತಿಭಾವಂತರಿಗೆ ಉದ್ಯೋಗಾವಕಾಶಗಳು ದೊರೆಯಲಿದೆ. ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮುಂದುವರೆಸುವ ವಿದ್ಯಾರ್ಥಿಗಳ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಡೇಟಾ ಸೈನ್ಸ್, ಕಂಪ್ಯೂಟರ್ ಡಿಸೈನಿಂಗ್ ಮುಂತಾದ ಕೋರ್ಸುಗಳು ಆರಂಭಿಸಲಾಗುವುದು. ಅಲ್ಲದೇ ಕುವೆಂಪು ವಿವಿಯ ಸಹಯೋಗದೊಂದಿಗೆ ಟೂರಿಸಂ ಅಂಡ್ ಟ್ರಾವೆಲ್ಸ್, ಬಿ.ಎಸ್.ಡಬ್ಲ್ಯೂ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಯತ್ನ ನಿರಂತರವಾಗಿರಲಿದೆ. ಡಿಸೆಂಬರ್ ಮಾಸಾಂತ್ಯದಲ್ಲಿ ಇಲ್ಲಿನ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೊಂಡು ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಇದರಿಂದಾಗಿ ಹೆಚ್ಚಿನ ಜನರಿಗೆ ಉದ್ಯೋಗ ದೊರೆಯುವ ವಿಶ್ವಾಸವಿದೆ. ಬದಲಾದ ಕಾಲಘಟ್ಟದಲ್ಲಿ ದಶಕದಿಂದೀಚೆಗೆ ಶಿವಮೊಗ್ಗ ಜಿಲ್ಲೆ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ಶೈಕ್ಷಣಿಕವಾಗಿ ಅನೇಕ ವಿವಿಗಳು, ಕೈಗಾರಿಕೆಗಳು ಆರಂಭಗೊಂಡಿವೆ. ಸ್ಥಗಿತಗೊಂಡಿರುವ ಭದ್ರಾವತಿಯ ಅವಳಿ ಕಾರ್ಖಾನೆಗಳನ್ನು ಪುನರಾರಂಭಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರೊ. ಚೇತನಕುಮಾರ್, ಪ್ರೊ. ಗೌತಮ್, ಪ್ರೊ. ಸಾಯಿಲತಾ, ಡಾ. ಅರುಣಾ, ಡಾ. ನಾಗರಾಜ್ ಸೇರಿದಂತೆ ಪ್ರೇರಣಾ ತಾಂತ್ರಿಕ ಮತ್ತು ತಾಂತ್ರಿಕೇತರ ಶಿಕ್ಷಣ ಸಂಸ್ಥೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉದ್ಯೋಗಾವಕಾಶವನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪ್ರಮಾಣಪತ್ರ ವಿತರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Jayaram G KimmaneKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP B Y RaghavendraNewsinKannadaNewsKannadaShimogaShivamoggaShivamogga Newsಜಯರಾಮ್ ಜಿ ಕಿಮ್ಮನೆಬಿ.ವೈ. ರಾಘವೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Previous Post

ಚಂದ್ರಗುತ್ತಿ: ಗಣಿ ಚಟುವಟಿಕೆಗಳಿಂದ ಉಂಟಾದ ದುಷ್ಪರಿಣಾಮಗಳ ಬಗ್ಗೆ ಗ್ರಾಮಸ್ಥರ ಬೇಸರ…

Next Post

ಕೋವಿಡ್ ಸಂಕಷ್ಟದ ನಡುವೆಯೂ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಸಾಧನೆ ಗಮನಾರ್ಹ: ರಾಹುಲ್ ಅಗರ್ವಾಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋವಿಡ್ ಸಂಕಷ್ಟದ ನಡುವೆಯೂ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಸಾಧನೆ ಗಮನಾರ್ಹ: ರಾಹುಲ್ ಅಗರ್ವಾಲ್

ಕೋವಿಡ್ ಸಂಕಷ್ಟದ ನಡುವೆಯೂ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಸಾಧನೆ ಗಮನಾರ್ಹ: ರಾಹುಲ್ ಅಗರ್ವಾಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL