No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಕಾದಿದೆ ಮುಂದೆ ಆಘಾತ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

kalpa News by kalpa News
May 7, 2024
in ಶಿವಮೊಗ್ಗ
0
ಯಡಿಯೂರಪ್ಪ ಅವರನ್ನೂ ಮೀರಿಸಿ ರಾಘವೇಂದ್ರ ಅವರಿಂದ ಅಭಿವೃದ್ಧಿ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Representational Image only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕನಿಷ್ಠ  3 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರದ ಮತಗಟ್ಟೆಯಲ್ಲಿ ಮತ ಚಲಾವಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಕಳೆದ ಹಲವು ದಿನಗಳಿಂದ ನಮ್ಮ ಅಭ್ಯರ್ಥಿ ಪರ ಶ್ರಮ ಹಾಕಿದ್ದಾರೆ. ಅದಕ್ಕೆ ತಕ್ಕ ಪ್ರತಿಫಲ ದೊರಕುತ್ತದೆ ಎಂಬ ವಿಶ್ವಾಸವಿದೆ ಮತದಾರರು ನಮ್ಮ ಅಭ್ಯರ್ಥಿ ಪರವಾಗಿ ಸ್ಪಂದನೆ ಮಾಡುತ್ತಿದ್ದಾರೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 25 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಬಾರಿ ಅಷ್ಟು ಕ್ಷೇತ್ರಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಹೊಸ ದಾಖಲೆಯಲ್ಲಿ ನಿರ್ಮಾಣ ಮಾಡುತ್ತೇವೆ. ರಾಜ್ಯದ ಯಾವುದೇ ಲೋಕಸಭಾ ಕ್ಷೇತ್ರಕ್ಕೆ ಹೋದರು ಬಿಜೆಪಿ ಹಾಗೂ ಮೋದಿ ಪರವಾದ ಹಳೆ ಕಂಡುಬರುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಕೂಡ ರಾಜ್ಯದ ಹಲೆವೆಡೆ ಪ್ರವಾಸ ನಡೆಸಿದ್ದೇನೆ. ಫಲಿತಾಂಶ ಬಿಜೆಪಿ ಹಾಗೂ ಮೋದಿ ಪರವಾಗಿ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೂನ್ ನಾಲ್ಕರಂದು ಫಲಿತಾಂಶ ಪ್ರಕಟಗೊಳ್ಳಲಿ ಆಗ ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಗೆ ಅಚ್ಚರಿ ಕಾಯ್ದಿದೆ. ಮತದಾರರು ನಮಗೆ ಆಶೀರ್ವಾದ ಮಾಡುತ್ತಾರೆ. ಇದು ಸತ್ಯ. ಈ ಚುನಾವಣೆಯಲ್ಲಿ ಜಾತಿ, ಉಪಜಾತಿ ಯಾವುದು ಇಲ್ಲ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದೇ ಎಲ್ಲರ ಒತ್ತಾಸೆಯಾಗಿದೆ. ಯಾರು ಏನೇ ಜಾತಿ ಸಮೀಕರಣ ಮಾಡಲಿ, ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಂದಿಡಲಿ, ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಕಾರ್ಯಕ್ರಮ ಹಾಗೂ ಯೋಜನೆಗಳು ನೇರವಾಗಿ ಜನರನ್ನು ತಲುಪಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ ಬಿಜೆಪಿ ಪರವಾದ ವಾತಾವರಣವನ್ನು ಈ ಬಾರಿ ಚುನಾವಣೆಯಲ್ಲಿ ಸೃಷ್ಟಿಸಿದೆ ಎಂದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 20 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಎಂಬ ಭ್ರಮಲೋಕದಲ್ಲಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿ ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲು ಪರಿಣಾಮ ಬೀರಲಿದೆ. ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಮುಂದೆ ಆಘಾತ ಕಾದಿದೆ ಎಂದು ಭವಿಷ್ಯ ನುಡಿದರು.

ಮೊದಲ ಹಂತದ ಚುನಾವಣೆ ನಡೆದ 14 ಕ್ಷೇತ್ರದಲ್ಲಿ 14ರಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ಮಾಹಿತಿ ಇದೆ. ಅದೇ ರೀತಿ ಇಂದು ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು ಅತಿ ಹೆಚ್ಚು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಅದೇ ರೀತಿ ಪ್ರಧಾನಿ ಮೋದಿ ಅವರ ಅಭಿಲಾಷೆಯಂತೆ ದೇಶದಲ್ಲಿ 400 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗುರಿ ತಲುಪುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ಜನತೆ ಮೆಚ್ಚಿಕೊಂಡಿದ್ದಾರೆ. ಈ ಬಾರಿ ಕೂಡ ಮತದಾರರು ರಾಘವೇಂದ್ರ ಅವರನ್ನು ಕೈ ಹಿಡಿಯಲಿದ್ದಾರೆ. ಕೇಂದ್ರದಲ್ಲಿ ಮೋದಿ ಆಡಳಿತವನ್ನು ಮತ್ತೊಮ್ಮೆ ನೋಡಬೇಕೆಂಬ ಆಸೆ ಹೊಂದಿರುವ ಮತದಾರರು ರಾಘವೇಂದ್ರ ಅವರನ್ನು ಕನಿಷ್ಠ 3 ಲಕ್ಷ ಅಂತರದಲ್ಲಿ ಗೆಲುವು ತಂದು ಕೊಡಲಿದ್ದಾರೆ ಎಂದರು.

Also read: ಬಂಡಾಯದಿಂದ ನಮಗೇನು ನಷ್ಟವಿಲ್ಲ: ಸಂಸದ ರಾಘವೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋಣ ಸ್ಪರ್ಧೆ ಏರ್ಪಡುವ ಪ್ರಶ್ನೆಯೇ ಇಲ್ಲ. ಮತದಾರರೇನು ದಡ್ಡರಲ್ಲ. ಯೋಚಿಸಿ ಸರಿಯಾದ ತೀರ್ಮಾನ ಕೈಗೊಳ್ಳುತ್ತಾರೆ. ನಮ್ಮ ಅಭ್ಯರ್ಥಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.

ಹಾಸನ ಪೆನ್ ಡ್ರೈ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿದೆ. ಆದರೆ ಅಧಿಕಾರಿಗಳ ಮೇಲೆ ಯಾವ ರೀತಿಯ ಒತ್ತಡ ಹಾಕುತ್ತಾರೆ ಎಂಬ ಅನುಮಾನವಿದೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಸರ್ಕಾರ ಈ ಬಗ್ಗೆ ಯೋಚಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

    

Tags: B Y VijayendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಂಡಾಯದಿಂದ ನಮಗೇನು ನಷ್ಟವಿಲ್ಲ: ಸಂಸದ ರಾಘವೇಂದ್ರ

Next Post

ಲೋಕಸಭೆ ಚುನಾವಣೆ: ಗಮನ ಸೆಳೆದ ಅರಮನೆ ಮಾದರಿ ಮತಗಟ್ಟೆ | ಹಲವು ಮುಖಂಡರಿಂದ ಹಕ್ಕು ಚಲಾವಣೆ

kalpa News

kalpa News

Next Post
ಲೋಕಸಭೆ ಚುನಾವಣೆ: ಗಮನ ಸೆಳೆದ ಅರಮನೆ ಮಾದರಿ ಮತಗಟ್ಟೆ | ಹಲವು ಮುಖಂಡರಿಂದ ಹಕ್ಕು ಚಲಾವಣೆ

ಲೋಕಸಭೆ ಚುನಾವಣೆ: ಗಮನ ಸೆಳೆದ ಅರಮನೆ ಮಾದರಿ ಮತಗಟ್ಟೆ | ಹಲವು ಮುಖಂಡರಿಂದ ಹಕ್ಕು ಚಲಾವಣೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL