ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನ ಭಾಗದಲ್ಲಿ ಮೊದಲ ಬಾರಿಗೆ ಕಥಕ್ ನೃತ್ಯಾಸಕ್ತರಿಗಾಗಿ ಡಿ.27ರಿಂದ 29ರವರೆಗೂ ವಿಶೇಷ ಪರಿಚಯಾತ್ಮಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಮೂರು ದಿನಗಳ ಕಾಲ ಸಂಜೆ 5.30ರಿಂದ 8 ಗಂಟೆಯವರೆಗೆ ನಗರದ ಕೋಟೆ ರಸ್ತೆಯಲ್ಲಿರುವ ವಾಸವಿ ಪಬ್ಲಿಕ್ ಶಾಲೆಯ ಆವರಣದಲ್ಲಿರುವ ಚಿಗುರು ಸಭಾಂಗಣದಲ್ಲಿ ಈ ಕಾರ್ಯಾಗಾರ ನಡೆಯಲಿದೆ.
ಅಂತಾರಾಷ್ಟ್ರೀಯ ಖ್ಯಾತಿಯ ಕಥಕ್ ನೃತ್ಯಪಟು ಕುಮಾರಿ ಸೋಹಿನಿ ಕಾರಂತ್ ರವರು ಈ ಕಾರ್ಯಾಗಾರವನ್ನು ನಡೆಸಿಕೊಡುತ್ತಿದ್ದಾರೆ. ಇವರು ಪಂಡಿತ್ ಬಿರ್ಜು ಮಹಾರಾಜ್ ಹಾಗೂ ಬೆಂಗಳೂರಿನ ಅಭಿನವ ನೃತ್ಯಕೇಂದ್ರದ ನಿರುಪಮಾ ರಾಜೇಂದ್ರರವರ ಶಿಷ್ಯೆ, ಪ್ರಸ್ತುತ ಬೆಂಗಳೂರಿನಲ್ಲಿ ಸಾತ್ವತೀ ನೃತ್ಯಶಾಲೆಯನ್ನು ನಡೆಸುತ್ತಿದ್ದಾರೆ.
Also read: ಶೀಘ್ರದಲ್ಲೇ ಮರೆಗುದ್ದಿ ಏತ ನೀರಾವರಿ ಯೋಜನೆಗೆ ಅನುಮೋದನೆ: ಗೋವಿಂದ ಕಾರಜೋಳ
ಶ್ರೀ ಶಾರದಾ ಸಂಗೀತ ನೃತ್ಯ ವಿದ್ಯಾಲಯವು ಆಯೋಜಿಸುತ್ತಿರುವ ಮೂರು ದಿನಗಳ ಈ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವವರು ಡಿ.24ರ ಒಳಗೆ ಹೆಸರು ನೋಂದಾಯಿಸಬೇಕು. ನೋಂದಾವಣೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ವೀಣಾ ಅರುಣ್ ಕುಮಾರ್, 9844444820, 6361083158 ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಶಾರದಾ ಸಂಗೀತ ನೃತ್ಯ ವಿದ್ಯಾಲಯದ ಪ್ರಾಂಶುಪಾಲರಾದ ವಿದ್ವಾನ್ ಜಿ. ಅರುಣ್ ಕುಮಾರ್ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















