ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳ ಆರೋಗ್ಯ ಸದೃಢವಾಗಿದ್ದಾಗ ಮಾತ್ರ ಬಲಿಷ್ಠ ರಾಷ್ಟçವನ್ನು ನಿರ್ಮಿಸಲು ಸಾಧ್ಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಅಭಿಪ್ರಾಯಪಟ್ಟರು.
ನಗರದ ಸೈನ್ಸ್ ಮೈದಾನದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ Subbaiah Medical College ವತಿಯಿಂದ ಆಯೋಜಿಸಲಾಗಿರುವ ಮಕ್ಕಳ ಬೃಹತ್ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ಪೋಷಕರು ಭ್ರೂಣದಿಂದ ಆರಂಭಿಸಿ ಮಗು ಜನಿಸಿ, ಪ್ರೌಢಾವಸ್ಥೆಗೆ ತಲುಪುವವರೆಗೂ ಪ್ರತಿ ಹಂತದಲ್ಲೂ ಸಹ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು. ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಗಮನ ಹರಿಸಿ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿ ಎಂದು ಸಲಹೆ ನೀಡಿದರು.
ಭ್ರೂಣದಿಂದ ಆರಂಭಿಸಿ ಮಕ್ಕಳು ಪ್ರೌಢಾವಸ್ಥೆಗೆ ಬರುವವರೆಗೂ ಅವರ ಆರೋಗ್ಯವನ್ನು ಕಾಪಾಡಲು ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಹಲವು ಇಲಾಖೆಗಳು ಇದಕ್ಕಾಗಿ ಹಗಲಿರುಳು ದುಡಿಯುತ್ತಿವೆ. ಇದರ ಪ್ರಯೋಜನ ಪಡೆದುಕೊಂಡು ಮಕ್ಕಳಿಗೆ ಸದೃಢ ಆರೋಗ್ಯ ನೀಡುವ ಮೂಲಕ ಉತ್ತಮ ಭವಿಷ್ಯ ಕಲ್ಪಿಸಿ ಎಂದರು.
ನಾನು ಇಂದು ಶಾಸಕನಾಗಿ ನಿಮ್ಮ ಮುಂದೆ ನಿಲ್ಲಲು ಎಲ್ಲರೂ ನನಗೆ ಬೆಂಬಲ ನೀಡಿದ್ದೀರಿ. ಈಗ ಶಾಸಕನಾಗಿ ನಿಮ್ಮ ಸತ್ಕಾರ್ಯಗಳಿಗೆ ಬೆಂಬಲ ನೀಡುವುದು ನನ್ನ ಜವಾಬ್ದಾರಿಯಾಗಿದೆ. ಎಲ್ಲ ರೀತಿಯ ಸಮಾಜಮುಖಿ ಕಾರ್ಯಗಳಿಗೆ ನನ್ನ ಬೆಂಬಲ ಸದಾ ಇರುತ್ತದೆ ಎಂದರು.
Also read: ರಾಜ್ಯೋತ್ಸವದ ಮೂಲ ಆಶಯ ಅರಿತು ಸಂಸ್ಕಾರವಂತ ಆಚರಣೆಗಳು ಹೆಚ್ಚಾಗಲಿ
ದೇಶದ ಭವಿಷ್ಯ ಮಕ್ಕಳೇ ಆಗಿದ್ದಾರೆ. ಹೀಗಾಗಿ, ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಆರೋಗ್ಯಕರ ಮಕ್ಕಳನ್ನು ಸಮಾಜಕ್ಕೆ ನೀಡಿದಾಗ ಮಾತ್ರ ಬಲಿಷ್ಠ ರಾಷ್ಟçವನ್ನು ನಿರ್ಮಿಸಲು ಸಾಧ್ಯ.
-ಎಸ್.ಎನ್. ಚನ್ನಬಸಪ್ಪ, ಶಾಸಕರುಕಿವುಡ, ಮೂಖ ಹಾಗೂ ಅಂಧ ಮಕ್ಕಳ ವಿಶೇಷ ಶಿಕ್ಷಣಕ್ಕಾಗಿ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿ ಮಾಡಿದ್ದು, ಇದಕ್ಕಾಗಿ ಇಲಾಖೆ ಕೆಲಸ ಮಾಡುತ್ತಿದೆ. ಇದನ್ನು ಜಿಲ್ಲೆಯ ಎಲ್ಲ ತಾಲೂಕುಗಳಿಗೆ ವಿಸ್ತರಣೆ ಮಾಡುವ ಯೋಜನೆಯಿದ್ದು, ಈ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯ.
ಚಂದ್ರಪ್ಪ, ಸಿಡಿಪಿಒ

ನಿಮ್ಮ ಮಕ್ಕಳ ಕೇವಲ ನಿಮ್ಮ ಕುಟುಂಬಕ್ಕಷ್ಟೇ ಸೀಮಿತವಲ್ಲ, ದೇಶದ ಆಧಾರ ಸ್ಥಂಭಗಳು. ಈ ಸ್ಥಂಭಗಳು ಸದೃಢಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಪ್ರತಿ ಪೋಷಕರೂ ನೆನಪಿನಲ್ಲಿಡಬೇಕು.
ಡಾ. ವಿನಾಯಕ್ಮಕ್ಕಳ ಆರೋಗ್ಯ ಕಾಪಾಡುವುದು ಕೇವಲ ಪೋಷಕರ ಕರ್ತವ್ಯವಲ್ಲ, ಇದು ಸಮಾಜದ ಜವಾಬ್ದಾರಿಯಾಗಿದೆ. ಹೀಗಾಗಿ, ಇಂತಹ ಶಿಬಿರಗಳನ್ನು ಆಯೋಜಿಸುತ್ತಿz್ದೆÃವೆ. ಸರ್ಕಾರ ಆಯೋಜಿಸುವ ಇಂತಹ ಯೋಜನೆಗಳಿಗೆ ನಮ್ಮ ಸಂಸ್ಥೆ ಸದಾಕಾಲ ಸಹಕಾರ ನೀಡುತ್ತದೆ.
ಡಾ.ಎಸ್. ನಾಗೇಂದ್ರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಚಂದ್ರಪ್ಪ ಮಾತನಾಡಿ, ಐಸಿಡಿಎಸ್ ಅಡಿಯಲ್ಲಿ ನವಜಾತ ಮಕ್ಕಳ ಆರೋಗ್ಯಕ್ಕಾಗಿ ಯೋಜನೆಗಳು ಲಭ್ಯವಿದೆ. ಮಕ್ಕಳ ಆರೋಗ್ಯಕ್ಕಾಗಿ ಸರ್ಕಾರದಿಂದ ವಿವಿಧ ಯೋಜನೆಗಳು ಜಾರಿಯಲ್ಲಿವೆ. ಅಂಗನವಾಡಿಯಿAದ ಮೊದಲ್ಗೊಂಡು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಇವುಗಳ ಸದುಪಯೋಗ ಮಾಡಿಕೊಳ್ಳಬಹುದು ಎಂದರು.
ಮಕ್ಕಳಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸುತ್ತಿರಬೇಕು. ಮಕ್ಕಳಲ್ಲಿನ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿದಾಗ ಅದನ್ನು ಸಂಪೂರ್ಣ ಗುಣಪಡಿಸುವುದು ಸಾಧ್ಯ. ಇದಕ್ಕಾಗಿ ಸರ್ಕಾರದಿಂದ ಹಲವಾರು ಯೋಜನೆಗಳು ಲಭ್ಯವಿದ್ದು, ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ವಿನಾಯಕ್ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳಿಂದ ಸದೃಢ ರಾಷ್ಟç ನಿರ್ಮಿಸಲು ಅವರ ಅರೋಗ್ಯ ಹಾಗೂ ಉತ್ತಮ ವಿದ್ಯಾಭ್ಯಾಸದಿಂದ ಮಾತ್ರ ಸಾಧ್ಯ ಎಂದರು.
ಮಕ್ಕಳ ಆರೋಗ್ಯ ಕಾಪಾಡಲು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಮಕ್ಕಳ ವಿಭಾಗ ದಿನದ 24 ಗಂಟೆಯೂ ಸಹ ಸಜ್ಜಾಗಿ ಕಾರ್ಯ ನಿರ್ವಹಿಸುತ್ತಿದೆ. ಇದಕ್ಕಾಗಿ ಅತ್ಯಾಧುನಿಕ ಸೌಲಭ್ಯಗಳು ನಮ್ಮಲ್ಲಿ ಲಭ್ಯವಿದ್ದು, ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ ನಮ್ಮಲ್ಲಿದೆ. ಮಕ್ಕಳ ವಿಭಾಗದೊಂದಿಗೆ ಬೇರೆ ವಿಭಾಗಗಳೂ ಸಹ ಇದಕ್ಕಾಗಿ ಶ್ರಮಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಬಿ.ವೈ. ಚಂದ್ರಶೇಖರ್ ಮಾತನಾಡಿದರು.
ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ಲತಾ ನಾಗೇಂದ್ರ, ಪ್ರಾಂಶುಪಾಲ ಡಾ.ಕೃಷ್ಣಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ.ಎಚ್.ಎಂ. ಶಿವಮೂರ್ತಿ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















