ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಲಾ ಆವರಣದಲ್ಲಿ ದೊರೆತ ಬೆಲೆಬಾಳುವ ಚಿನ್ನದ ಉಂಗುರವನ್ನು ಹಿಂತಿರುಗಿಸಿ ವಿದ್ಯಾರ್ಥಿಯೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ.

ತುಂಗಾ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಸತ್ಯನಾರಾಯಣ ಅವರು ಸುಮಾರು 60 ಸಾವಿರ ಬೆಲೆ ಬಾಳುವ ಚಿನ್ನದ ಉಂಗುರ ಕಳೆದುಕೊಂಡಿದ್ದರು.

ಶಾಲಾ ಆವರಣದಲ್ಲಿ ಫಾಯಾಜ್ ಎಂಬ ವಿದ್ಯಾರ್ಥಿಗೆ ಉಂಗುರ ದೊರೆತಿದ್ದು, ಅದನ್ನು ಪ್ರಾಮಾಣಿಕವಾಗಿ ಮುಖ್ಯಶಿಕ್ಷಕರಿಗೆ ಹಿಂದಿರುಗಿಸಿದ್ದಾನೆ. ಬಾಲಕನ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















