ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರೀತಿಸಿ ಎಂಟು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆಯ ದಾಸನಕೊಡಿಗೆಯಲ್ಲಿ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಶಮಿತಾ(24) ಎಂದು ಗುರುತಿಸಲಾಗಿದೆ.
ಮೃತ ಶಮಿತಾ ಅವರ ಪತಿ ವಿದ್ಯಾರ್ಥ್ ಎನ್ನುವವರು ಸೋಮೇಶ್ವರ ಅಭಯಾರಣ್ಯದಲ್ಲಿ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್ ಪ್ರೀತಿಸಿ ಮದುವೆಯಾಗಿದ್ದರು.
Also read: ಕೇವಲ 20 ನಿಮಿಷದಲ್ಲಿ ಮಾಡಬಹುದಾದ ಸಮಾಜಸೇವೆಯೆಂದರೆ ‘ರಕ್ತದಾನ’: ಪ್ರೊ. ಎಸ್ ವೆಂಕಟೇಶ್
ರಾತ್ರಿ ಅತ್ತೆ ಮಾವನಿಗೆ ತಿಳಿಸಿ ಶಮಿತಾ ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ತೆರಳಿದ್ದರು. ಆದರೆ, ಬೆಳಗಾಗುವಷ್ಟರಲ್ಲಿ ನೇಣಿಗೆ ಶರಣಾಗಿದ್ದಾರೆ. ಆದರೆ ಬೆಳಿಗ್ಗೆ ಕೊಠಡಿ ಬಾಗಿಲು ತೆರೆಯದಿದ್ದ ಹಿನ್ನಲೆಯಲ್ಲಿ ಕುಟುಂಬದವರು, ಕೆಲಸದವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಯುವತಿಯ ಪೋಷಕರು ಆಗಮಿಸಿದ ನಂತರ ಬಾಗಿಲು ಒಡೆಯಲಾಗಿದೆ. ಮೃತದೇಹದ ಬಳಿ ಡೆತ್ ನೋಟ್ ಲಭ್ಯವಾಗಿದೆ. ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ.
ಆಗುಂಬೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಆಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















