ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಧಿಡೀರನೆ ಬೆಂಕಿ ಕಾಣಿಸಿಕೊಂಡಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ.
ಹೊನ್ನಾವರದಿಂದ ಹೊರಟ ಕೆಎಸ್‌ಆರ್‌ಟಿಸಿ ಬಸ್ ಸಾಗರ ಮುಖ್ಯರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದ ಈ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
Also read: ಕಸ್ತೂರಿ ರಂಗನ್ ವರದಿ | ಸಿಎಂ, ಸಂಪುಟ, ಸರ್ವ ಪಕ್ಷ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ | ಈಶ್ವರ ಖಂಡ್ರೆ
ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ, ಸಕಾಲಕ್ಕೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದು, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸ್ಥಳದಲ್ಲಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು ಎಲ್ಲಾರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post