No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತಿದೆ: ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2023
in ಶಿವಮೊಗ್ಗ
0
ಹೆಣ್ಣು ಗೊತ್ತಾಗಿಲ್ಲ, ನಿಶ್ಚಿತಾರ್ಥವಾಗಿಲ್ಲ, ತಾಳಿ ಕಟ್ಟದೇ ಮುಂದಿನ ಯೋಚನೆ ಏಕೆ? ಕೆಎಸ್‌ಈ ಲೇವಡಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ತಮಿಳುನಾಡಿಗೆ ಕಾವೇರಿ ನೀರನ್ನು ಬಿಟ್ಟಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಡಿಸಿಎಂ ಈಶ್ವರಪ್ಪ, DCM Eshwarappa ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತೆ ಕಾಣುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಕಳ್ಳತನದಿಂದ ಬಿಡದೇ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಕಳ್ಳತನದಿಂದ ನೀರು ಬಿಟ್ಟಿರುವುದೇ ದೊಡ್ಡ ತಪ್ಪು. ಆಗ ಇವರನ್ನು ಕಳ್ಳ ಎಂದು ಹೇಳಲಾಗಿತ್ತು. ಕಳ್ಳತನದಿಂದ ನೀರು ಬಿಟ್ಟಿದ್ದಕ್ಕೆ ಕಳ್ಳ ಎಂದರೆ ತಪ್ಪು ಇವರಿಗೆ. ಎಲ್ಲರ ಜೊತೆ ಮಾತುಕತೆ ನಡೆಸಿದ್ದರೆ ರಾಜ್ಯದ ಜನರು ಅವರ ಜೊತೆ ಇರುತ್ತಿದ್ದರು ಎಂದರು.
ಸ್ಟಾಲಿನ್ Stalin ಎಂಬ ಪುಣ್ಯಾತ್ಮನಿಗೆ ಒಪ್ಪಿಸಲು, ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ DKShivakumar ನೀರು ಬಿಟ್ಟಿದ್ದಾರೆ. ಸಿದ್ಧರಾಮಯ್ಯ CMSiddaramaiah ಹಾಗೂ ಡಿ.ಕೆ. ಶಿವಕುಮಾರ್ ರಾಜ್ಯದ ಜನರಿಗೆ ದ್ರೋಹ ಮಾಡಿದ್ದಾರೆ.‌ ಈಗ ವಕೀಲರು, ತಜ್ಞರು ಹಾಗೂ ಹಲವರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಮೊದಲು ಕಳ್ಳ ಎಂದೆ, ಈಗ ದಡ್ಡರು ಎನ್ನಬೇಕಾಗಿದೆ ಎಂದು ಲೇವಡಿ ಮಾಡಿದರು.

ನಾವು ಜನರ ಜೊತೆ ಇದ್ದೆವೆ ಎಂದು ಈಗ ಹೇಳುತ್ತಿದ್ದಾರೆ. ಇದಕ್ಕಿಂತ ಅನ್ಯಾಯ ಮತ್ತೇನಿದೆ. ರೈತರು, ವಕೀಲರು ಹಾಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದೆ ಮುಖ್ಯಮಂತ್ರಿಗಳು ನೀರು ಬಿಟ್ಟಿದ್ದ ಉದಾಹರಣೆ ಇದೆ. ಇವರಿಬ್ಬರು ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.
ನೀರೆಲ್ಲಾ ಬಿಟ್ಟಾದ ಮೇಲೆ ಈಗ ಸಭೆ ನಡೆಸಿ ಉಪಯೋಗವೇನು? ಎಲ್ಲವೂ ಸಂವಿಧಾನಬದ್ಧವಾಗಿ ಆಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಚರ್ಚೆ ನಡೆಸದೇ ನೀರು ಬಿಟ್ಟಿದ್ದೆ ತಪ್ಪು. ಎಲ್ಲ ಪಕ್ಷದವರ ಜೊತೆ ಚರ್ಚಿಸಿ ನೀರು ಬಿಡಬೇಕಿತ್ತು. ಎಲ್ಲದಕ್ಕೂ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂಬುದು ಕೂಡ ತಪ್ಪು. ರಾಜ್ಯದಲ್ಲಿ ಬರ ಕೂಡ ಇದ್ದು, ರಾಜ್ಯಕ್ಕೆ ಎಷ್ಟು ನೀರು ಬೇಕು ಎಂದು ಸರ್ವೆ ಮಾಡಿಲ್ಲ. ಇದು ನೂರಾರು ವರ್ಷಗಳ ಸಮಸ್ಯೆ ಎಂದರು.

Also read: ಅಲಂಕಾರ ತೆರವು ಸಂಬಂಧ ಗೊಂದಲ ನಿರ್ಮಾಣ: ಎಸ್‌ಪಿ ಮಧ್ಯಪ್ರವೇಶದಿಂದ ತಿಳಿಗೊಂಡ ವಾತಾವರಣ

ಚಲನಚಿತ್ರ ನಟರು ಬರಲಿಲ್ಲ ಎಂದು ಈಗ ಬೊಬ್ಬೆ ಹೊಡೆಯುತ್ತಿದ್ದಾರೆ. ನೀವು ನೀರು ಬಿಟ್ಟು ಬೇರೆಯವರ ಮೇಲೆ ಬೊಟ್ಟು ತೋರಿಸುವ ಕೆಲಸ ಮಾಡುತ್ತಿದ್ದಾರೆ. ಜನ ಆಯ್ಕೆ ಮಾಡಿದ ಸರ್ಕಾರ 5 ವರ್ಷ ಇರಬೇಕು ಎಂಬುದು ನಮ್ಮ ಆಸೆ. ಪ್ರಧಾನಮಂತ್ರಿ ಮೇಲೆ ಆರೋಪ ಮಾಡುವುದೇ ಇವರ ಕೆಲಸವಾಗಿದೆ. ಅಕ್ಕಿ ಕೊಟ್ಟಿಲ್ಲ ಎಂದು ಆರೋಪಿಸಿದ್ದರು. ಈಗ ನೀರಿನ ಬಗ್ಗೆ ಆರೋಪಿಸುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬರ ಬಂದಿದೆ, ಎಷ್ಟು ದುಡ್ಡು ಬೇಕು ಅಂಕಿ ಅಂಶ ಕೇಂದ್ರಕ್ಕೆ ಕಳಿಸಿದ್ದಿರಾ ? ರಾಜ್ಯದ ಹಿತಾಸಕ್ತಿ ಕಾಪಾಡಬೇಕೆಂದರೆ ಎಲ್ಲರೂ ಒಟ್ಟಾಗಿರಬೇಕು. ಇಡೀ ಕರ್ನಾಟಕವನ್ನು ಒಟ್ಟಾಗಿ ಕರೆದು ಕಾನೂನು ತಜ್ಞರ ಬಳಿ ಚರ್ಚಿಸಬೇಕು. ಕೇವಲ ನಿಮ್ಮ ಉಪಮುಖ್ಯಮಂತ್ರಿಗಳ ಸ್ಥಾನಕ್ಕೆ ಬಡಿದಾಟವಾಗಿದೆ ಎಂದು ದೂರಿದರು.

ನುಡಿದಂತೆ ನಡೆದಿದೆ ಸರ್ಕಾರ ಎಂದು ಹೇಳುತ್ತಿದ್ದಾರೆ. ಇನ್ನಾರು ತಿಂಗಳಲ್ಲಿ ಸರ್ಕಾರ ಬೀಳುತ್ತೆ ಎಂದು ಕುಮಾರಸ್ವಾಮಿ ಹೇಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಕೆಲವೇ ದಿನಗಳಲ್ಲಿ ಡಿಸಿಎಂ ಶಿವಕುಮಾರ್ ಕೂಡ ಹೇಳಲಿದ್ದಾರೆ. ಇವರು 3 ಜನ ಉಪಮುಖ್ಯಮಂತ್ರಿಗಳ ಬಡಿದಾಟ ಮಾಡಿಕೊಂಡು ಕೂತಿದ್ದಾರೆ. ಈಗಲಾದರೂ ತಜ್ಞರು, ಸರ್ವಪಕ್ಷಗಳನ್ನು, ವಕೀಲರನ್ನು ಕರೆಸಿ ತೀರ್ಮಾನಿಸಲಿ ಎಂದು ಸಲಹೆ ನೀಡಿದರು.
ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಘೋಷಿಸಲಿ
ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ರಾಜ್ಯದ ಬಿಜೆಪಿಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು ಕೂಡ ಇದನ್ನೇ ಕೇಳುತ್ತಿದ್ದಾರೆ. ಕಾಂಗ್ರೆಸ್‌ ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿದ್ದಾರೆ. ಸದನದಲ್ಲಿ ಲೇವಡಿ ಮಾಡುತ್ತಿದ್ದಾರೆ. ಕೇಂದ್ರದ ಬಿಜೆಪಿ ನಾಯಕರೂ ರಾಜ್ಯದ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ವಿಚಾರದಲ್ಲಿ ನಮ್ಮ ತಪ್ಪೇನಾದರು ಇದ್ದರೆ ಕರೆದು ಬುದ್ದಿ ಹೇಳಲಿ. ನಮಗೆ ಗೊತ್ತಾಗದೆ ಯಾವುದಾದರೂ ತಪ್ಪಾಗಿರಬಹುದು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ 28 ಸ್ಥಾನ ಗೆಲ್ಲಬೇಕಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ಘೋಷಿಸಲಿ ಎಂದು ಹೇಳಿದರು.
ಸಂಸತ್ ಚುನಾವಣೆ ಹತ್ತಿರ ಬರುತ್ತಿದೆ. ನಳೀನ್ ಕುಮಾರ್ ಕಟೀಲರನ್ನೇ ಮುಂದುವರೆಸುವುದಾದರೆ ಮುಂದುವರಿಸಲಿ. ಯಾವುದಾದರೂ ತೀರ್ಮಾನವನ್ನು ಆದಷ್ಟು ಬೇಗನೇ ತೆಗೆದುಕೊಳ್ಳಲಿ. ಈ ಬಗ್ಗೆ ಕೇಂದ್ರದ ನಾಯಕರಿಗೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿಗಳು ಹಿಂದುತ್ವ ಮರೆಯುತ್ತಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ.

ಮುಸ್ಲಿಂ ಗೂಂಡಾಗಳು ಕಾಂಗ್ರೆಸ್‌ ಸರ್ಕಾರ ತಮ್ಮ ಪರವಾಗಿದೆ ಎಂದು ಭಾವಿಸಿದರೆ ತಪ್ಪು. ಹರ್ಷನ ಹತ್ಯೆ ಘಟನೆಯನ್ನು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅಲಂಕಾರ ತೆರವು ಸಂಬಂಧ ಗೊಂದಲ ನಿರ್ಮಾಣ: ಎಸ್‌ಪಿ ಮಧ್ಯಪ್ರವೇಶದಿಂದ ತಿಳಿಗೊಂಡ ವಾತಾವರಣ

Next Post

ಸತತ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಮಾರುತಿ ಖಾಶೆಂಪುರ್ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸತತ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಮಾರುತಿ ಖಾಶೆಂಪುರ್ ಆಯ್ಕೆ

ಸತತ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಮಾರುತಿ ಖಾಶೆಂಪುರ್ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಸಾವು

June 1, 2026
ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯ ಇಲಾಖೆಯ ಪ್ರಮುಖ ಧ್ಯೇಯ: ಬೇಲಾ ಮೀನಾ

May 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ-ಸೋಲಾಪುರ ದೈನಂದಿನ ಪ್ಯಾಸೆಂಜರ್ ರೈಲು ನಿಲುಗಡೆ ಮುಂದುವರಿಕೆ

May 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL