ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರದ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಓದುತ್ತಿದ್ದ ಭವ್ಯಾ(19) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದೀಪನಿಗೆ ಭವ್ಯಾ ಪರಿಚಯವಾಗಿತ್ತು. ಇದನ್ನೆ ನೆಪವಾಗಿಟ್ಟುಕೊಂಡು ಪದೇ ಪದೇ ಫೋನ್ ಮಾಡಿ ಪ್ರೀತಿಸುವಂತೆ ಪ್ರದೀಪ್ ಪೀಡಿಸುತ್ತಿದ್ದ ಎಂದು ಭವ್ಯಾ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಳು.
ಪ್ರದೀಪನ ಹಿಂಸೆ ತಾಳಲಾರದೆ ಆಕೆ ವಿಷ ಸೇವಿಸಿ ಆತ್ಮಹತ್ಯೆ ಎಂದು ಮಾಡಿಕೊಂಡಿದ್ದಾಳೆ ಸಹೋದರ ಕೃಷ್ಣಮೂರ್ತಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರು ಬುಧವಾರ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post