ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣದ ಆಕಾಂಕ್ಷಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ನಗರದಲ್ಲಿ ನೀಟ್ ಪರೀಕ್ಷಾ ಕೇಂದ್ರ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿಯು ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದೆ.
ನೀಟ್ ಪರೀಕ್ಷೆ ಬರೆಯಲು ಹಾಲಿ ಇರುವ ಕೇಂದ್ರ ಸ್ಥಳದಿಂದ ದೂರದ ಸ್ಥಳಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮತ್ತು ಕೊರೋನಾ ಸಾಂಕ್ರಾಮಿಕತೆಯ ಮಧ್ಯೆ ಬೇರೆ ಸ್ಥಳಗಳಿಗೆ ತೆರಳಿ ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆತಂಕಪಡುತ್ತಿದ್ದಾರೆ. ಆದ್ದರಿಂದ ಪರಿಸ್ಥಿತಿಯನ್ನು ಅವಲೋಕಿಸಿ ಶಿವಮೊಗ್ಗಕ್ಕೆ ನೀಟ್ ಪರೀಕ್ಷಾ ಕೇಂದ್ರವನ್ನು ಕಲ್ಪಿಸಬೇಕು ಎಂದು ಎಬಿವಿಪಿ ಆಗ್ರಹಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post