ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಸ್ ಅಪಘಾತದಲ್ಲಿ ನಗರದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಬೆಳಗ್ಗೆ ನಗರ ಸಾರಿಗೆ ಖಾಸಗಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಬಸ್ ನ ಫುಟ್ ಬೋರ್ಡ್ ಮೇಲೆ ನಿಂತಿದ್ದು, ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಅದೇ ಬಸ್ ನ ಹಿಂಬದಿ ಚಕ್ರ ಆತನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ಶಾಂತಮ್ಮ ಲೇಔಟ್ ನಿವಾಸಿ ಎನ್ನಲಾಗಿದೆ. ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post