ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಹೊರವಲಯದಲ್ಲಿ ಮಲವಗೊಪ್ಪದಲ್ಲಿ ನಿನ್ನೆ ತಡ ರಾತ್ರಿ ಬೇಕರಿಯೊಂದರಲ್ಲಿ ಆಕಸ್ಮಿಕ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ,
ಮಲವಗೊಪ್ಪದ ಬಿಹೆಚ್ ರಸ್ತೆಯಲ್ಲಿಯೇ ಇರುವ ಕೃಷ್ಣ ಮೂರ್ತಿ ಎಂಬುವವರ ಮಾಲೀಕತ್ವದ ಶ್ರೀಕೃಷ್ಣ ಬೇಕರಿಯಲ್ಲಿ ರಾತ್ರಿ 11.30 ಸುಮಾರಿಗೆ ಅವಘಡ ಸಂಭವಿಸಿದ್ದು, ಬೇಕರಿಯಲ್ಲಿದ್ದ ತಿನಿಸು, ಫ್ರಿಜ್ ಮತ್ತಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ತಕ್ಷಣ ಎಚ್ಚೆತ್ತ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಎರಡು ವಾಹನಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾದರೂ ಭಾರಿ ಪ್ರಮಾಣದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಬೇಕರಿ ಇದ್ದುದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳೀಯರ ಪ್ರಕಾರ ಬೇಕರಿಯ ವಸ್ತು, ಪೀಠೋಪಕರಣಗಳು, ಒವನ್ ಹೀಗೆ ಎಲೆಕ್ಟ್ರಾನಿಕ್ಸ್ ವಸ್ತುಗಳು ಸೇರಿ ಸುಮಾರು 10 ಲಕ್ಷ ರೂ ನಷ್ಟ ಆಗಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post