No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಿ

ರಾಜ್ಯ ಪರಿಶಿಷ್ಟ ಜಾತಿ/ವರ್ಗ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ .ಪಲ್ಲವಿ ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 3, 2025
in ಶಿವಮೊಗ್ಗ
0
ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಲ್ಲಿ ಅಸಂಘಟಿತರಾಗಿರುವ ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾದ ಯೋಜನೆಗಳಲ್ಲಿ ಸೌಲಭ್ಯವನ್ನು ಒದಗಿಸಿಕೊಟ್ಟು, ಸಾಮಾಜಿಕವಾಗಿ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ವರ್ಗ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಅವರು ಹೇಳಿದರು.

ಅವರು ಇಂದು ಶಿವಮೊಗ್ಗ ಸಮೀಪದ ಗೋಂದಿ ಚಟ್ನಳ್ಳಿ ಗ್ರಾಮದ ಶಿಳ್ಳೇಕ್ಯಾತ ಸಮುದಾಯದ ನಿವಾಸಿಗಳ ಬೀದಿಗೆ ಭೇಟಿ ನೀಡಿ, ಅಲ್ಲಿನ ಬೀದಿ ದೀಪ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ, ನೈರ್ಮಲ್ಯ ಮುಂತಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿದ ನಂತರ ಅಲ್ಲಿನ ನಿವಾಸಿಗಳಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಳ್ಳೇಕ್ಯಾತ ಜನಾಂಗವು ಪರಿಶಿಷ್ಟ ಜಾತಿಗೆ ಸೇರಿದ್ದು, ಜೀವನೋಪಾಯಕ್ಕಾಗಿ ಎಲ್ಲೆಂದರಲ್ಲಿ ಚದುರಿ ಹೋಗಿ, ಜೀವನ ನಿರ್ವಹಣೆಗಾಗಿ, ನೆಮ್ಮದಿಯ ಬದುಕಿಗಾಗಿ ಅಲೆದಾಡುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದ ಅವರು ಸ್ವಾತಂತ್ರ್ಯ ನಂತರ ಹಲವು ದಶಕಗಳು ಉರುಳಿದರೂ ಕನಿಷ್ಟ ಜೀವನ ನಿರ್ವಹಿಸುತ್ತಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದರು.

ಸಂಕಷ್ಟದಲ್ಲಿದ್ದು, ಅತ್ಯಂತ ಕನಿಷ್ಟ ಜೀವನ ನಿರ್ವಹಿಸುತ್ತಿರುವ ಶಿಳ್ಳೇಕ್ಯಾತ ಸಮುದಾಯದವರು ಮೀನುಗಾರಿಕೆ ನಡೆಸಲು ಅನುಕೂಲವಾಗುವಂತೆ ಒಂದಷ್ಟು ಕೆರೆಗಳನ್ನು ಮೀಸಲಿರಿಸಬೇಕು. ಅಲ್ಲದೇ ಮೀನುಗಾರರಿಗೆ ಅಗತ್ಯ ಸಲಕರಣೆಗಳ ಜೊತೆಗೆ ಮಾರುಕಟ್ಟೆ ಸೌಲಭ್ಯ, ಶೀತಲೀಕರಣ ಘಟಕಗಳನ್ನು ಕಲ್ಪಿಸಿಕೊಡಬೇಕು.

ನಾಗಪ್ಪ, ಶಿಳ್ಳೇಕ್ಯಾತ ಸಮುದಾಯದ ರಾಜ್ಯ ಅಧ್ಯಕ್ಷ.

ಗ್ರಾಮಕ್ಕೆ ಹೊಂದಿಕೊಂಡಂತಿರುವ ಸರ್ವೇ ನಂ.104ರಲ್ಲಿ ಸರ್ಕಾರದ ಕಾಯ್ದಿರಿಸಿದ ಜಮೀನಿದ್ದು, ಇಲ್ಲಿನ ನಿರ್ವಸತಿಗ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಿ, ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು.

ಶಿಳ್ಳೇಕ್ಯಾತ ಸಮುದಾಯದ ಮುಖಂಡ. ಗೋಂದಿ ಚಟ್ನಳ್ಳಿ.

ಶಿಳ್ಳೆಕ್ಯಾತ ಜನಾಂಗದ ಮಕ್ಕಳು ಆರನೇ ತರಗತಿಯಿಂದ ಹತ್ತನೆ ತರಗತಿಯವರೆಗಿನ ಶಿಕ್ಷಣ ಪಡೆಯಲು ಪ್ರವೇಶ ಪರೀಕ್ಷೆಗಳಿಲ್ಲದೆ ಸರ್ಕಾರಿ ವಸತಿ ನಿಲಯಗಳಲ್ಲಿ ಪ್ರವೇಶಾವಕಾಶ ಹಾಗೂ ಉಚಿತ ವಸತಿ ಸೌಲಭ್ಯವನ್ನು ಒದಗಿಸಿಕೊಡಲಾಗುತ್ತಿದೆ. ಐಎಎಸ್, ಐಪಿಎಸ್., ಐಎಫ್ಎಸ್ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ತರಬೇತಿಗೆ ಸರ್ಕಾರದ ವತಿಯಿಂದಲೇ ನಿಯೋಜಿಸಲಾಗುತ್ತಿದೆ.

ಮಲ್ಲೇಶಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ.

ಅತ್ಯಂತ ಹಿಂದುಳಿದಿರುವ, ಶಿಕ್ಷಣದಿಂದ ದೂರವೇ ಇರುವ, ಜೀವನೋಪಾಯಕ್ಕಾಗಿ ಮೀನುಗಾರಿಕೆಯನ್ನು ಅವಲಂಬಿಸಿರುವ ಈ ಜನಾಂಗದವರಿಗೆ, ಅವರ ನೆಲೆಸಿರುವ ಬೀದಿಗಳಿಗೆ ಶುದ್ಧ ಕುಡಿಯುವ ನೀರು, ಸೂರು, ಶಾಲೆ, ವಿದ್ಯುತ್ಸಂಪರ್ಕ, ನೀರು-ನೈರ್ಮಲ್ಯ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸ್ವಚ್ಚತೆಗೆ ಗಮನಹರಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

Also read: ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ | ಹೆಚ್‌ಡಿಕೆ ಪ್ರತಿಕ್ರಿಯೆ
ಅಲ್ಲದೇ ಇಲ್ಲಿನ ಅನೇಕ ಕುಟುಂಬಗಳ ಸದಸ್ಯರಿಗೆ ಸೂಕ್ತ ವಸತಿ ಸೌಲಭ್ಯವಿಲ್ಲದೇ ಒಂದೇ ಸೂರಿನಡಿ ಅನೇಕ ಕುಟುಂಬಗಳ ಜೀವನ ನಿರ್ವಹಿಸುತ್ತಿರುವುದು ಕಂಡುಬರುತ್ತಿದೆ. ಅಲ್ಲದೇ ಇಂತಹ ಮನೆಗಳಲ್ಲಿರುವ ಅನೇಕ ಕುಟುಂಬಗಳಿಗೆ ಪಡಿತರ ಚೀಟಿ ಇಲ್ಲವಾಗಿದೆ. ಇನ್ನೂ ಅನೇಕ ಕುಟುಂಬಗಳ ಮನೆಗಳಿಗೆ ಕನಿಷ್ಟ ವಿದ್ಯುತ್ಸೌಲಭ್ಯವೂ ಇಲ್ಲದಿರುವುದು ಬೇಸರ ತಂದಿದೆ. ಇಂತಹ ಕುಟುಂಬಗಳಿಗೆ ಕೂಡಲೇ ಸೌಲಭ್ಯ ಒದಗಿಸಿಕೊಡುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ಪ್ರಸ್ತುತ ಇವರು ವಾಸಿಸುತ್ತಿರುವ ಅನೇಕರಿಗೆ ಹಕ್ಕುಪತ್ರಗಳಿಲ್ಲದಿರುವುದರಿಂದ ಮಳೆಗಾಲದಲ್ಲಿ ಹಾನಿಗೊಳಗಾದ ಮನೆಗಳಿಗೆ ಪರಿಹಾರಧನ ಹೊರತುಪಡಿಸಿ, ಶಾಶ್ವತ ಮನೆ ನಿರ್ಮಾಣಕ್ಕೆ ಇಲಾಖೆಯಿಂದ ದೊರೆಯಬೇಕಾದ ಸೌಲಭ್ಯ ದೊರೆಯುತ್ತಿಲ್ಲ. ಆದ್ದರಿಂದ ಇವರಿಗೆ ತುರ್ತಾಗಿ ಅಗತ್ಯ ದಾಖಲೆಗಳನ್ನು ನೀಡುವಲ್ಲಿ ಆಗಿರುವ ಅಡಚಣೆ ಹಾಗೂ ಪರಿಹಾರ ಕ್ರಮಗಳ ಕುರಿತು ಮಾಹಿತಿ ನೀಡಬೇಕಲ್ಲದೇ ಕೂಡಲೇ ಸಮೀಕ್ಷೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು.
ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿಕೊಡಲಾದ ರಸ್ತೆ, ನೀರು ಮುಂತಾದವುಗಳನ್ನು ಸರ್ಕಾರವೇ ನಿರ್ವಹಿಸುವುದು ಕಷ್ಟಕರ. ಇಲ್ಲಿನ ಗ್ರಾಮಸ್ಥರೂ ಕೂಡ ಅದರ ಸದ್ಭಳಕೆ ಮತ್ತು ರಕ್ಷಣೆಗೆ ಮುಂದಾಗಬೇಕು. ಇಲ್ಲಿನ ಬೀದಿನಾಯಿಗಳು, ಬಿಡಾಡಿ ಹಂದಿಗಳ ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ಗಮನಹರಿಸುವಂತೆ ಸೂಚಿಸಿದರು.

ಈ ಸಮುದಾಯ ವಿದ್ಯಾವಂತ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಆರಂಭಿಸಿ, ಸ್ವಾವಲಂಬಿ ಜೀವನ ಸಾಗಿಸಲು ಮುಂದಾಗುವಂತೆ ಸಲಹೆ ನೀಡಿದ ಅವರು, ನಿಗಮದ ವತಿಯಿಂದ ಸಹಾಯಧನದೊಂದಿಗೆ ನೇರಸಾಲಸೌಲಭ್ಯ, ವಾಹನ ಸಾಲ ಇತ್ಯಾದಿಗಳನ್ನು ನೀಡಲಾಗುತ್ತಿದ್ದು, ಅರ್ಹರು ಈ ಯೋಜನೆಗಳ ಲಾಭ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ, ಡಿ.ವೈ.ಎಸ್ಪಿ., ಸಂಜೀವಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧು, ಅಲೆಮಾರಿ ಅಭಿವೃದ್ಧಿ ನಿಗಮದ ಸದಸ್ಯ ಸಂದೀಪ್, ತಹಶೀಲ್ದಾರ್ರಾಜೀವ್, ನಿಗಮದ ವ್ಯವಸ್ಥಾಪಕ ಸುರೇಶ್, ಶಿಳ್ಳೇಕ್ಯಾತ ಸಮುದಾಯದ ರಾಜ್ಯಾಧ್ಯಕ್ಷ ನಾಗಪ್ಪ, ಆನಂದ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ | ಹೆಚ್‌ಡಿಕೆ ಪ್ರತಿಕ್ರಿಯೆ

Next Post

ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕೋತ್ಸವ | ಫೆ.5ರಿಂದ ಭದ್ರಾ ಜಲಾಶಯದಿಂದ ನೀರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾ ಜಲಾಶಯದಿಂದ ನೀರು ಬಿಡುಗಡೆ | ನದಿ ಪಾತ್ರದ ಜನರು  ಮುನ್ನೆಚ್ಚರಿಕೆ ವಹಿಸಲು ಸೂಚನೆ

ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕೋತ್ಸವ | ಫೆ.5ರಿಂದ ಭದ್ರಾ ಜಲಾಶಯದಿಂದ ನೀರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

April 1, 2026
ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

ಸಂಕೇತ್‌ ಸಮಾಧಿ ಧ್ವಂಸ | ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

April 1, 2026
ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ? ಕ್ರೇಜ್’ಗೆ ಇನ್ನೊಬ್ಬರ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ

ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ? ಕ್ರೇಜ್’ಗೆ ಇನ್ನೊಬ್ಬರ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ

April 1, 2026
ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

April 1, 2026
ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL