No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸರ್ಕಾರಕ್ಕೆ 165 ಕೋಟಿ ರೂ.ಗಳ ಕ್ರಿಯಾಯೋಜನೆ ಸಲ್ಲಿಕೆ: ಪಾಲಿಕೆ ಆಯುಕ್ತ ಮಾಯಣ್ಣಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2026
in ಶಿವಮೊಗ್ಗ
0
ಸರ್ಕಾರಕ್ಕೆ 165 ಕೋಟಿ ರೂ.ಗಳ ಕ್ರಿಯಾಯೋಜನೆ ಸಲ್ಲಿಕೆ: ಪಾಲಿಕೆ ಆಯುಕ್ತ ಮಾಯಣ್ಣಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

2025-26ನೇ ಸಾಲಿಗೆ ಸಂಬಂಧಿಸಿದಂತೆ ಸುಮಾರು 165 ಕೋಟಿ ರೂ.ಗಳ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಇಲ್ಲಿಯತನಕ ಪಾಲಿಕೆಗೆ ಯಾವುದೇ ಅನುದಾನ ಬಂದಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತ ಡಿ.ಸಿ. ಮಾಯಣ್ಣಗೌಡ ತಿಳಿಸಿದರು.

ಅವರು ಇಂದು 2026-27ನೇ ಸಾಲಿನ ಆಯ-ವ್ಯಯ ಒಂದನೇ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಿದ್ದರು. ಸಭೆಯ ಆರಂಭದಲ್ಲಿ ಕಳೆದ ಸಾಲಿನಲ್ಲಿ ತಯಾರಿಸಿದ ಆಯವ್ಯಯದ ಅನುಷ್ಟಾನ ಕುರಿತ ಮಾಹಿತಿ ಮತ್ತು ಅಂಕಿ-ಅಂಶಗಳನ್ನು ಅಧಿಕಾರಿಗಳು ಪಿಪಿಟಿ ಮೂಲಕ ತೋರಿಸಿ ಮನವರಿಕೆ ಮಡಲು ಯತ್ನಿಸಿದಾಗ ನಾಗರಿಕ ಹಿತರಕ್ಷಣಾ ಸಮಿತಿಗಳ ಒಕ್ಕೂಟ ಪದಾಧಿಕಾರಿಗಳಾದ ಕೆ.ವಿ.ವಸಂತ್‌ಕುಮಾರ್, ಡಾ.ಸತೀಶ್‌ಕುಮಾರ್ ಶೆಟ್ಟಿ, ಪರಿಸರ ರಮೇಶ್ ಅವರು ಮುದ್ರಿತ ಪ್ರತಿಯನ್ನು ಸಭೆಗೆ ಪೂರೈಸಿದ ನಂತರವೇ ಸಭೆಯನ್ನು ಮುಂದುವರಿಸಬೇಕು ಎಂದು ಪಟ್ಟು ಹಿಡಿದರು. ಪ್ರಮುಖ ಸಭೆಯನ್ನು ಆಯೋಜಿಸಿದಾಗ ಅಂಕಿಅಂಶಗಳ ಮುದ್ರಿತ ಪ್ರತಿಯನ್ನು ಸದಸ್ಯರಿಗೆ ನೀಡಬೇಕು ಎಂಬ ವ್ಯವದಾನ ಪಾಲಿಕೆಯ ಅಧಿಕಾರಿಗಳಿಗೆ ಇರಬೇಕು ಎಂದು ತರಾಟೆಗೆ ತೆಗೆದುಕೊಂಡರು.
ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಸೇರಿದಂತೆ ಇಲ್ಲಿಯವರೆಗೂ ಒಂದು ನಯಾಪೈಸೆಯೂ ಸರ್ಕಾರದಿಂದ ಬಂದಿಲ್ಲ. ಎಲ್ಲಾ ಪ್ರಸ್ತಾವನೆಗಳಿಗೆ ಕೇವಲ ಮಂಜೂರಾತಿ ದೊರಕಿದೆ. ಮಹಾತ್ಮಗಾಂಧಿ ನಗರಯೋಜನೆ-2ಕ್ಕೆ 120 ಕೋಟಿ, ಎನ್.ಜಿ.ಟಿ. ಕಾಮಗಾರಿಗಳಿಗೆ 40 ಕೋಟಿ ರೂಪಾಯಿ ಮಂಜೂರಾತಿ ದೊರಕಿದೆ. ಅದರ ಅನುದಾನ ಬಂದಿಲ್ಲ. ಈ ಪ್ರಸ್ತಾವಿತ ಯೋಜನೆಗಳಿಗೆ ಹಣ ಬಂದರೂ ಎನ್.ಜಿ.ಟಿ., ಕೆಯುಐಡಿಎಫ್‌ಸಿ ಮೂಲಕವೇ ಟೆಂಡರ್ ಪ್ರಕ್ರಿಯೆ ಕಾಮಗಾರಿ ಆರಂಭವಾಗಲಿದೆ. ಪಾಲಿಕೆ ವ್ಯಾಪ್ತಿಯ ನವುಲೆ, ತ್ಯಾವರೆಚಟ್ನಹಳ್ಳಿ, ಗೋಪಿಶೆಟ್ಟಿಕೊಪ್ಪ, ಪುರಲೆ ಮೊದಲಾದ ನಾಲ್ಕು ಕೆರೆಗಳ ಅಭಿವೃದ್ಧಿಗೆ 25 ಕೋಟಿ ರೂ. ಕ್ರಿಯಾಯೋಜನೆ ತಯಾರಿಸಲಾಗಿದ್ದು, ಅದು ಡಿಪಿಆರ್ ಹಂತದಲ್ಲಿದೆ. ಪಾಲಿಕೆ ವ್ಯಾಪ್ತಿಯ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ. ಇವು ಯಾವುದಕ್ಕೂ ಸರ್ಕಾರದಿಂದ ಪಾಲಿಕೆಗೆ ನೇರವಾಗಿ ಹಣ ಬರುವುದಿಲ್ಲ ಎಂದು ಪುನರುಚ್ಚರಿಸಿದರು.

ಪಾಲಿಕೆಯ ವ್ಯಾಪ್ತಿಯಲ್ಲಿ 196 ಪಾರ್ಕುಗಳಿದ್ದು, 98 ಪಾರ್ಕುಗಳಿಗೆ ಬೇಲಿ, ಕಾಂಪೌಂಡ್ ಗೋಡೆ ಮೊದಲಾದ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. 2014ರಲ್ಲೇ ನಗರಸಭೆಯು ಪಾಲಿಕೆಯಾಗಿ ಪದನ್ನೋತಿ ಹೊಂದಿದ್ದರೂ ಪಾರ್ಕ್‌ನಿರ್ವಹಣೆಗೆ ಪ್ರತ್ಯೇಕ ತೋಟಗಾರಿಕಾ ಇಲಾಖೆ ಇರಲಿಲ್ಲ. ಸೂಡಾದಿಂದ 53 ಪಾರ್ಕುಗಳ ಅಭಿವೃದ್ಧಿಗೆ ನಿರಾಕ್ಷೇಪಣಾ ಪತ್ರ ಕೇಳಿದ್ದು ಪಾರ್ಕ್ ಅಭಿವೃದ್ಧಿಯಾದ ಬಳಿಕ ಅವು ಪಾಲಿಕೆಗೆ ಹಸ್ತಾಂತರವಾದ ನಂತರ ಅವುಗಳ ನಿರ್ವಹಣೆ ಪಾಲಿಕೆಯದ್ದಾಗಿರುತ್ತದೆ. ಈಗ ಪಾಲಿಕೆಯನ್ನು ಮೂರು ವಲಯಗಳನ್ನಾಗಿ ವಿಂಗಡಿಸಿ, 75 ಪಾರ್ಕುಗಳ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಇವುಗಳನ್ನು ಎಇಇಗಳಾದ ಮಧುನಾಯ್ಕ, ಸಂತೋಷ್, ಪ್ರವೀಣ್ ನೋಡಿಕೊಳ್ಳುವರು ಎಂದು ತಿಳಿಸಿದರು.
ಕ್ರೀಡಾಪಟುಗಳಿಗೆ ಅದರಲ್ಲೂ ವಿಶೇಷವಾಗಿ ಬಾಕ್ಸಿಂಗ್‌ನಲ್ಲಿ ಸಾಧನೆಗೈದವರಿಗೆ ಪಾಲಿಕೆವತಿಯಿಂದ ವಿಶೇಷ ಪುರಸ್ಕಾರ ನೀಡುವ ಯೋಜನೆಯನ್ನು ಅಳವಡಿಸಿಕೊಳ್ಳಬೇಕು. ನೆಹರೂ ಮೈದಾನದಲ್ಲಿ ಈ ಕ್ರೀಡಾಪಟುಗಳಿಗೆ ಅನುಕೂಲವಾಗಲು ಬಾಕ್ಸಿಂಗ್‌ಶೆಡ್‌ವೊಂದನ್ನು ನಿರ್ಮಿಸಬೇಕು ಎಂಬ ಸದಸ್ಯರ ಸಲಹೆಗೆ ಉತ್ತರಿಸಿದ ಆಯುಕ್ತರು ನೆಹರೂ ಮೈದಾನದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಪಾಲಿಕೆಗೆ ಅವಕಾಶವಿಲ್ಲ ಎಂದರು.

ಸ್ಮಾರ್ಟ್‌ಸಿಟಿಯಾದರೂ ಕೂಡ ಖಾಸಗಿ ಬಸ್ ನಿಲ್ದಾಣದ ಶೌಚಾಲಯ ನಿರ್ವಹಣೆ ಇಲ್ಲದೆ ನಗರದ ಮಾನ-ಮರ್ಯಾದೆ ಕಳೆಯುತ್ತಿದೆ. ಕೂಡಲೇ ಶೌಚಾಲಯ ನಿರ್ವಹಣೆಗೆ ವಿಶೇಷ ಅನುದಾನ ನೀಡಿ ನಿರ್ವಹಣೆ ಮಾಡಿ. ಪಾಲಿಕೆಯ ವಾಣಿಜ್ಯ ಸಂಕೀರ್ಣಗಳು ನಿರ್ಮಾಣವಾಗಿ 3 ವರ್ಷವಾದರೂ ಕೂಡ ಬಾಡಿಗೆಗೆ ನೀಡಿಲ್ಲ. ಆದಾಯ ಇಲ್ಲದೆ ತೆರಿಗೆ ಹಣ ವ್ಯರ್ಥವಾಗಿದೆ. ಇನ್ನು ಮುಂದೆ ವಾಣಿಜ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಹಣನೀಡಬೇಡಿ. ಶುದ್ಧ ಕುಡಿಯುವ ನೀರಿನ ಯೋಜನೆ ತಯಾರಾಗಿ ವರ್ಷಗಳೇ ಕಳೆದರೂ ಇನ್ನೂ ಕೂಡ ಸುಸಜ್ಜಿತ ನೀರಿನ ಪ್ರಯೋಗಾಲಯ ಮತ್ತು ಅದಕ್ಕೆ ಬೇಕಾದ ಉಪಕರಣಗಳು ಇನ್ನೂ ಬಂದಿಲ್ಲ. 15 ವರ್ಷಗಳ ಕೂಗು ವ್ಯರ್ಥವಾಗಿದ್ದು, ಬೇರೆ ನಗರಗಳ ನೀರು ಶುದ್ಧಿಕರಣ ಘಟಕದ ಮಾಹಿತಿ ಮತ್ತು ಮಾದರಿ ನೀಡಿದ್ದರೂ ಸಹ ನಮ್ಮ ಶಿವಮೊಗ್ಗದಲ್ಲಿ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ಕಾಲದಲ್ಲಿ ನೀರಿನ ಸೆಲೆಯಾಗಿದ್ದ ನಗರದ ನವುಲೆ ಕೆರೆಗೆ ಈಗ ಮೂರು ಅಡಿ ವ್ಯಾಸದ ಪೈಪ್‌ಲೈನ್‌ಗಳಲ್ಲಿ ತ್ಯಾಜ್ಯ ನೀರು ಸೇರುತ್ತಿದೆ. ಮಳೆಗಾಲದಲ್ಲಿ ಕೆರೆಯ ಸುತ್ತಮುತ್ತಲಿನ ಪ್ರದೇಶಗಳಿಂದ ಕೆರೆಗೆ ಬರುವ ನೀರನ್ನು ಹೊರಗಡೆ ಬಿಡಲಾಗುತ್ತಿದೆ. ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಹಸಿರೀಕರಣಕ್ಕಾಗಿ ಸಧ್ಯಕ್ಕೆ ಹೋಸಯೋಜನೆ ಬೇಡ. ಇದೂವರೆಗೆ ಹಸಿರೀಕರಣದ ಹೆಸರಿನಲ್ಲಿ ಖರ್ಚುಮಾಡಿದ ಹಣವನ್ನು ಮತ್ತು ಗಿಡಗಳನ್ನು ಸದುಪಯೋಗಮಾಡಿ ಎಂದು ಸಲಹೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಬಲ್ಕೀಶ್‌ಬಾನು, ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಶಿವಮೊಗ್ಗ | ಜಿಲ್ಲಾಧಿಕಾರಿಗಳಿಗೂ ತಪ್ಪದ ಸೈಬರ್ ಕ್ರಿಮಿಗಳ ಕಾಟ | ಡಿಸಿ ಕೊಟ್ರು ಸಾರ್ವಜನಿಕ ಸಂದೇಶ

Next Post

ಭದ್ರಾವತಿ | ಜನವಸತಿ ಪ್ರದೇಶದ ಬಳಿ ಚಿರತೆಯಿಂದ ನಾಯಿ ಬೇಟೆ | ಸ್ಥಳೀಯರಲ್ಲಿ ಆತಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಜನವಸತಿ ಪ್ರದೇಶದ ಬಳಿ ಚಿರತೆಯಿಂದ ನಾಯಿ ಬೇಟೆ | ಸ್ಥಳೀಯರಲ್ಲಿ ಆತಂಕ

ಭದ್ರಾವತಿ | ಜನವಸತಿ ಪ್ರದೇಶದ ಬಳಿ ಚಿರತೆಯಿಂದ ನಾಯಿ ಬೇಟೆ | ಸ್ಥಳೀಯರಲ್ಲಿ ಆತಂಕ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

May 19, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL