No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾದರಿ ಮೃಗಾಲಯವಾಗಿ ಅಭಿವೃದ್ಧಿಪಡಿಸಲು ಕ್ರಮ : ಸಂಸದ ರಾಘವೇಂದ್ರ

kalpa News by kalpa News
April 20, 2021
in ಶಿವಮೊಗ್ಗ
0
ಮಾದರಿ ಮೃಗಾಲಯವಾಗಿ ಅಭಿವೃದ್ಧಿಪಡಿಸಲು ಕ್ರಮ : ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶಿವಮೊಗ್ಗದ ಮೃಗಾಲಯವನ್ನು ರಾಜ್ಯದ ಮಾದರಿ ಮೃಗಾಲಯವನ್ನು ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

ಅವರು ಇಂದು ರಾಜ್ಯ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಮತ್ತು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಮೃಗಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡುತ್ತಿದ್ದರು. ಈಗಾಗಲೇ ಈ ಮೃಗಾಲಯದ ಅಭಿವೃದ್ಧಿಗೆ 8.10ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಉದ್ದೇಶಿತ ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲು ಸುಮಾರು 10ಕೋಟಿ ರೂ.ಗಳ ಅಗತ್ಯವಿದ್ದು, ಅದನ್ನು ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಿಸಲು ಯತ್ನಿಸಲಾಗುವುದು. ಅದಕ್ಕಾಗಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಸರ್ಕಾರವು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಅನೇಕ ಕಾಮಗಾರಿಗಳಿಗೆ ಕೋಟ್ಯಾಂತರ ರೂ.ಗಳನ್ನು ಮಂಜೂರು ಮಾಡಿದೆ. ವಿಶೇಷವಾಗಿ ವಿಶ್ವವಿಖ್ಯಾತ ಜೋಗ-ಜಲಪಾತದ ಅಭಿವೃದ್ಧಿಗೆ 150ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಮಳೆಗಾಲದ ಕೆಲವೇ ದಿನಗಳಲ್ಲಿ ನೋಡಲಾಗುತ್ತಿದ್ದ ಜೋಗದ ಸೌಂದರ್ಯವನ್ನು ಸರ್ವ ಋತುಮಾನಗಳನ್ನು ನೋಡುವಂತೆ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಸಂಬಂಧ ಕೆ.ಪಿ.ಟಿ.ಸಿ.ಎಲ್.ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ವಾರಾಂತ್ಯದಲ್ಲಿ ಜಲಪಾತಕ್ಕೆ ನೀರನ್ನು ಹರಿಯಬಿಡಲಾಗುತ್ತಿದೆ. ಇದರಿಂದಾಗಿ ರಾಜ್ಯದ ಮೂಲೆಮೂಲೆಗಳಿಂದ ಪ್ರತಿದಿನ ಸುಮಾರು 20ಸಾವಿರಕ್ಕೂ ಹೆಚ್ಚಿನ ಪ್ರವಾಸಿಗರು ಈ ಸ್ಥಳಕ್ಕೆ ಭೇಟಿ ನೀಡುವ ಆಶಯ ಹೊಂದಲಾಗಿದೆ ಎಂದರು.

ಬನ್ನೇರುಘಟ್ಟ, ಮೈಸೂರು, ಹಂಪಿ ಇತ್ಯಾದಿ ಮೃಗಾಲಯಗಳಿಗಿಂತ ಹೆಚ್ಚಿನ ಅಂದರೆ ಸುಮಾರು 650 ಎಕರೆ ಭೂ ವಿಸ್ತೀರ್ಣದಲ್ಲಿ ನೈಸರ್ಗಿಕ ವಾತಾವರಣದಲ್ಲಿ ಮೃಗಾಲಯವಿದೆ. ಇದರ ಸಂಪೂರ್ಣವಾದ ಅಭಿವೃದ್ಧಿಪಡಿಸಬೇಕಾದ ಅಗತ್ಯವಿದೆ. ಪ್ರಸುತ ಸರ್ಕಾರದ ಲಭ್ಯ ಅನುದಾನದಲ್ಲಿ ಪ್ರಾಣಿಪಕ್ಷಿಗಳ ರಕ್ಷಣೆಗಾಗಿ ಪ್ರತ್ಯೇಕವಾದ 20 ಸುಸಜ್ಜಿತ ಘಟಕಗಳನ್ನು ಸ್ಥಾಪಿಸಲಾಗಿದೆ. ಇನ್ನು 20 ಘಟಕಗಳ ಸ್ಥಾಪನೆ ಮಾಡುವ ಕಾರ್ಯ ಭರದಿಂದ ಸಾಗಿದೆ. ಕೇಂದ್ರದ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಸ್ಥಳೀಯ ಕೈಗಾರಿಕೋದ್ಯಮಿಗಳು, ದಾನಿಗಳು, ಅಥವಾ ಖಾಸಗಿ ವ್ಯಕ್ತಿಗಳ ಸಹಕಾರ ಪಡೆದು ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಮೃಗಾಲಯದೊಳಗೆ ಸಂಚರಿಸಲು ರಸ್ತೆ, ಸೈಕಲ್, ಎಲೆಕ್ಟ್ರಿಕ್ ಮೋಟಾರ್‌ಪಾತ್, ಅಭಿವೃದ್ಧಿಪಡಿಸಲು, ಹಾಗೂ ಹವಾನಿಯಂತ್ರಿತ ಬಸ್ಸುಗಳನ್ನು ಒದಗಿಸಲು ಉದ್ದೇಶಿಸಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಇದರಿಂದಾಗಿ ಪ್ರಾಣಿ ಪಕ್ಷಿ ಪ್ರಿಯರಿಗೆ ಸಮಾಧಾನಕರ ವಾತಾವರಣ ನಿರ್ಮಾಣವಾಗಲಿದೆ. ಅಲ್ಲದೇ ಮುಂದಿನ ಪೀಳಿಗೆಗೆ ವನ್ಯಸಂಕುಲದ ಬಗೆಗಿನ ಪ್ರೀತಿ, ಅಭಿಮಾನ ಮೂಡಿಸಲು ಸಾಧ್ಯವಾಗಲಿದೆ ಎಂದರು.

ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ ದಿನದಂದು ಇಲ್ಲಿನ ಪ್ರಾಣಿಪಕ್ಷಿಗಳನ್ನು ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ಪಾಲ್ಗೊಂಡು ಮೃಗಾಲಯದ ಅಭಿವೃದ್ಧಿ ಸಹಕರಿಸಲು ವಿನಂತಿಸಿದರು.

ಶಿವಮೊಗ್ಗ ಸಮೀಪದ ಸಕ್ರೆಬೈಲಿನ ಆನೆಬಿಡಾರವನ್ನು ಪ್ರವಾಸಿಗರ ವೀಕ್ಷಣೆಗೆ ಅನುಕೂಲವಾಗುವಂತೆ 20ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಅಂತೆಯೇ ಶಿವಶರಣೆ ಅಕ್ಕiಹಾದೇವಿ ಅವರ ಜನ್ಮಸ್ಥಳ ಉಡುತಡಿಯನ್ನು 30ಕೋಟಿ ರೂ. ವೆಚ್ಚದಲ್ಲಿ ಅಕ್ಷರಧಾಮದ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ೨ದಿನಗಳ ಕಾಲ ತಂಗಿದ್ದು, ಪ್ರವಾಸದ ಸವಿ ಅನುಭವಿಸಿ, ಉಲ್ಲಸಿತರಾಗುವಂತೆ ಕ್ರಮ ವಹಿಸಲಾಗುವುದು ಎಂದರು..
ಅಲ್ಲದೇ ಮೃಗಾಲಯದ ಅಭಿವೃದ್ಧಿಗೆ ಅಗತ್ಯವಾಗಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಪ್ರಾಧಿಕಾರದ ಅಧ್ಯಕ್ಷರಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಮೃಗಾಲಯದ ಪ್ರಾಣಿಗಳ ಅನುಕೂಲಕ್ಕೆ ವರ್ಷ ಪೂರ್ತಿ ನೀರಿನ ಸಮಸ್ಯೆ ಉಲ್ಬಣವಾಗದಂತೆ ತುಂಗಾ ಜಲಾಶಯದಿಂದ ನೀರನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಮೃಗಾಲಯವನ್ನು ಇನ್ನಷ್ಟು ಆಕರ್ಷಕವಾಗಿ ಅಭಿವೃದ್ಧಿಪಡಿಸಲಾಗುವುದಲ್ಲದೇ ಇನ್ನಷ್ಟು ಪ್ರಾಣಿ-ಪಕ್ಷಿಗಳನ್ನು ತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ ಅವರು ಮಾತನಾಡಿ, ರಾಜ್ಯದ ಈ ಮೃಗಾಲಯವು ವಿಶಾಲವಾದ ಪ್ರದೇಶವನ್ನು ಹೊಂದಿದ್ದು, ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ, ನೆರೆಯ ರಾಜ್ಯ ಮತ್ತು ದೇಶಗಳಿಂದ ಇನ್ನಷ್ಟು ಪ್ರಾಣಿಪಕ್ಷಿಗಳನ್ನು ತರಲಾಗುವುದು ಎಂದರು.

ಪ್ರಸ್ತುತ ಮೃಗಾಲಯದಲ್ಲಿ 28 ವಿವಿಧ ಪ್ರಾಣಿ ಪಕ್ಷಿಗಳ ಆವರಣಗಳ ಕಾಮಗಾರಿ ಪೂರ್ಣಗೊಂಡಿದೆ. ಕಾಡುಕೋಣ ಸಫಾರಿ ಮತ್ತು ಆವರಣದ ಕಾಮಗಾರಿಯೂ ಪ್ರಗತಿಯಲ್ಲಿದೆ. ಉಳಿದಂತೆ ಇನ್ನೂ 32 ಪ್ರಾಣಿಪಕ್ಷಿಗಳ ಆವರಣಗಳ ಕಾಮಗಾರಿ ನಡೆಸಲು ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ತ್ಯಾವರೆಕೊಪ್ಪದಲ್ಲಿ ಸುಸಜ್ಜಿತ ಪಶು ಆಸ್ಪತ್ರೆ, ಕಚೇರಿ ಕಟ್ಟಡ, ಹಾಗೂ ಪ್ರಾಣಿಗಳ ಪುನವರ್ಸತಿ ಕೇಂದ್ರದ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮುಕುಂದಚಂದ್ರ, ಎನ್.ಜೆ.ರಾಜಶೇಖರ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KanndaLocal NewsMalnad NewsMP BY RaghavendraNewsinKannadaNewsKannadaSakrebailu elephant campShimogaShivamoggaShivamogga NewsState Zoo Development Authorityಮಲೆನಾಡು_ಸುದ್ಧಿರಾಜ್ಯ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರಶಿವಮೊಗ್ಗಶಿವಮೊಗ್ಗ_ನ್ಯೂಸ್ಸಕ್ರೆಬೈಲಿನ ಆನೆಬಿಡಾರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆಕ್ಷನ್ ಜಾರಿ ಮಾಡಿ, ಹೆಲ್ತ್‌ ಎಮರ್ಜೆನ್ಸಿ ಘೋಷಿಸಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿ: ಸಿದ್ದರಾಮಯ್ಯ ಸಲಹೆ

Next Post

ತತಕ್ಷಣವೇ ರಾಜ್ಯದಲ್ಲಿ ಲಾಕ್ ಡೌನ್ ಮಾಡಿ: ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

kalpa News

kalpa News

Next Post
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ತತಕ್ಷಣವೇ ರಾಜ್ಯದಲ್ಲಿ ಲಾಕ್ ಡೌನ್ ಮಾಡಿ: ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL