ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ ನಿಧನದಿಂದ ರಂಗಭೂಮಿ, ಸಿನೆಮಾ ರಂಗಗಳೆರಡಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ಸೂಚಿಸಿದ್ದಾರೆ.
ಇಹಲೋಕದ ಸಂಚಾರ ಕೊನೆಗೊಳಿಸಿದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ವಿದಾಯ. ಭಗವಂತ ಅವರಿಗೆ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥನೆ. ಓಂ ಶಾಂತಿ.#PMOIndia #BJP4India #BJP4Karnatak #CMofKarnataka#COVIDSecondWave #ShivamoggaSmartCity #SmartCity pic.twitter.com/UeRQRPjAcr
— K S Eshwarappa (@ikseshwarappa) June 14, 2021
ವಿಜಯ್ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ಬಡವಾಗಿದೆ. ಮೃತರಿಗೆ ಚಿರಶಾಂತಿ ಸಿಗಲಿ. ಮತ್ತು ಕುಟುಂಬಸ್ಥರಿಗೆ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post