ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ರೈಲ್ವೇ ಸ್ಟೇಷನ್ Shivamogga Railway station ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ Kuvempu University ಎನ್‍ಎಸ್‍ಎಸ್ ಘಟಕ, ಹೊಯ್ಸಳ ಕಾಲೇಜು ಮತ್ತು ಇತರೆ ಸಂಸ್ಥೆಗಳ ಸಹಯೋಗದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಇತರೆ ಕಾರ್ಯಕ್ರಮಗಳನ್ನು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದು ಎಡಿಇಎನ್ ಹರಿರಾಂ ಮೀನಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಸ್ವಾತಂತ್ರ್ಯದ 75 ವಾರ್ಷಿಕೋತ್ಸವದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಇಂದು ಬೆಳಿಗ್ಗೆ 7 ಗಂಟೆಗೆ ಆಯೋಜಿಸಲಾಗಿದ್ದ ‘ಏಕತೆಗಾಗಿ ಓಟ’ ಕಾರ್ಯಕ್ರಮಕ್ಕೆ ಸಹ ಅವರು ಚಾಲನೆ ನೀಡಿದರು.

Also read: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಜೆಡಿಎಸ್‌ನ ಇಬ್ಬರು ಶಾಸಕರ ಉಚ್ಛಾಟನೆ
ಬೆಳಿಗ್ಗೆ 9.30 ರಿಂದ 10.30 ರವರೆಗೆ ರೈಲ್ವೇ ಸ್ಟೇಷನ್ ಮತ್ತು ಆವರಣದಲ್ಲಿ ಸ್ವಚ್ಚತೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಎಲ್ಲರೂ ಕೂಡಿ ಸ್ವಚ್ಚತೆ ಕಾರ್ಯಕ್ರಮ ನಡೆಸಿಕೊಟ್ಟರು. ಈ ವೇಳೆ ರೈಲ್ವೇ, ಆರ್‍ಪಿಎಫ್ ಅಧಿಕಾರಿ/ಸಿಬ್ಬಂದಿ ವರ್ಗ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.









Discussion about this post