ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ರಿಶ್ಚಿಯನ್ ಸಮುದಾಯ Christian Community ಮತ್ತು ಚರ್ಚ್‌ಗಳ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರ್ಕಾರ BJP Government ಸಾಕಷ್ಟು ಸಹಕಾರ ನೀಡಿದೆ ಎಂದು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಂತಕುಮಾರ್ ಕೆನಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ವರ್ಷಗಳ ಕಾಲ ಸರಕಾರ ನಡೆಸಿದ ಕಾಂಗ್ರೆಸ್, ಜೆಡಿಎಸ್ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಯಾವುದೇ ಸಹಕಾರ ನೀಡಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿ ಸರಕಾರ 2009ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರತಿ ವರ್ಷ ಆಯವ್ಯಯದಲ್ಲಿ ರಾಜ್ಯದ ಕ್ರಿಶ್ಚಿಯನ್ ಸಮುದಾಯದ ಹಾಗೂ ಚರ್ಚ್ ಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರಕಾರಕ್ಕೆ ಸಮುದಾಯದ ಪರವಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್ ರೊಡ್ರಿಗಸ್, ಸಮುದಾಯದ ಪ್ರಮುಖರಾದ ನವೀನ್ ಆ್ಯಂಟೋನಿ, ಕ್ಲೆಮೆಂಟ್ ರಾಯನ್, ಮಾರ್ಟಿನ್ ವೀನಸ್, ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷ ಮಹಮ್ಮದ್ ಸಫಿವುಲ್ಲಾ, ಮಾಧ್ಯಮ ಸಹ ಪ್ರಮುಖ್ ಸುಧೀಂದ್ರ ಕಟ್ಟೆ ಉಪಸ್ಥಿತರಿದ್ದರು.
Also read: ದಿ. ಡಾ. ನಾಡಿಗ್ ಕೃಷ್ಣಮೂರ್ತಿ ಪತ್ರಿಕೋದ್ಯಮ, ವಿದ್ಯಾವಾಚಸ್ಪತಿ ಡಾ. ಕವಿತಾಕೃಷ್ಣ ಸಾಹಿತ್ಯ ಪ್ರಶಸ್ತಿ ಪ್ರಕಟ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post