ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದ್ವಿತೀಯ ಪಿಯುಸಿ ಫಲಿತಾಂಶ Second PUC Result ಇಂದು ಪ್ರಕಟಗೊಂಡಿದ್ದು, ನಗರದ ಆದಿಚುಂಚನಗಿರಿ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎಸ್. ಸ್ಪೂರ್ತಿ ರಾಜ್ಯಕ್ಕೆ 7ನೆಯ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
600ಕ್ಕೆ 590 ಅಂಕಗಳನ್ನು ಗಳಿಸಿರುವ ಸ್ಪೂರ್ತಿ, ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿನಿ ಹೊಳಲೂರಿನ ಸುರೇಶ್ ಹಾಗೂ ಸುಜಾತಾ ದಂಪತಿ ಪುತ್ರಿ. ಈಕೆಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post