ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆಯ ಬಗ್ಗೆ ಅರಿವು ಮೂಡಿಸುವ ಪಠ್ಯಗಳನ್ನು ಅಳವಡಿಸಬೇಕು ಆಗಮಾತ್ರ ವಿದ್ಯಾರ್ಥಿಯು ಸ್ವಯಂ ಚಿಕಿತ್ಸೆಯ ಜೊತೆಗೆ ಇತರರ ಪ್ರಾಣವನ್ನು ಉಳಿಸುವ ಸ್ಥೈರ್ಯವನ್ನು ಪಡೆಯುತ್ತಾನೆ ಎಂದು ಕರ್ನಾಟಕ ರೆಡ್ ಕ್ರಾಸ್ ಸಂಸ್ಥೆ ಉಪಾಧ್ಯಕ್ಷ ವಿಎಲ್‌ಎಸ್ ಕುಮಾರ್ ಹೇಳಿದರು.

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ 2021-2022ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನೆ ಅಧಿಕಾರಿಗಳಾದ ಡಾ.ನಾಗರಾಜ್ ಪರಿಸರ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಜೀವನದಲ್ಲಿ ಸೇವಾ ಮನೋಭಾವನೆ ಬೆಳೆಸುವುದರ ಜೊತೆಗೆ ನೈತಿಕ ಮೌಲ್ಯಗಳ ಅರಿವನ್ನು ನೀಡುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಶಿವಪ್ರಸಾದ್ ಬಿ.ಎಸ್ ವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕರಾದ ಹೆಚ್.ಸಿ. ಶಿವಕುಮಾರ್ , ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















