No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

kalpa News by kalpa News
June 24, 2025
in ಶಿವಮೊಗ್ಗ
0
ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯು ಎಂದಿನಂತೆ ಮಣಿಪಾಲ್ ಆರೋಗ್ಯ ಕಾರ್ಡ್-2025ರ #Manipal Health Card ನೋಂದಣಿಯನ್ನು ಆರಂಭಿಸಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಕಳೆದ 25 ವರ್ಷಗಳಿಂದ ಮಣಿಪಾಲ್ ಆರೋಗ್ಯ ಕಾರ್ಡನ್ನು ಪರಿಚಯಿಸಲಾಗುತ್ತಿದೆ. ಈ ಭಾರಿ ಸುಮಾರು 6.82 ಲಕ್ಷ ಸದಸ್ಯರು ಕಾರ್ಡನ್ನು ಹೊಂದಿದ್ದಾರೆ. ಸುಮಾರು 7ವರೆ ಲಕ್ಷ ಗುರಿಮುಟ್ಟುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ ಕಳೆದ ಬಾರಿ 22.8 ಕೋಟಿ ಮೊತ್ತದಷ್ಟು ರಿಯಾಯಿತಿಯನ್ನು ಮಣಿಪಾಲ್ ಆಸ್ಪತ್ರೆ ನೀಡಿದೆ ಎಂದರು.
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ. ಈ ಮೂಲಕ ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ ಮಣಿಪಾಲ್ ಸಂಸ್ಥೆಯ ಸಂಸ್ಥಾಪಕ ಡಾ. ಟಿ.ಎಂ.ಎ. ಪೈ ಅವರ ದೂರದೃಷ್ಟಿಯ ನಾಯಕತ್ವವನ್ನು ನೆನಪಿಸಿದ ಅವರು, “ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರ ಮಾರ್ಗದರ್ಶನದಲ್ಲಿ 2000 ರಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. 25 ವರ್ಷಗಳಲ್ಲಿ, ಇದು ಕೋಟ್ಯಂತರ ಫಲಾನುಭವಿಗಳ ಜೀವನವನ್ನು ಮುಟ್ಟಿದೆ ಎಂದರು.

ಕಾರ್ಡ್ ಸಣ್ಣದು-ಪ್ರಯೋಜನ ದೊಡ್ಡದು ಎಂಬ ನಿಟ್ಟಿನಲ್ಲಿ ಈ ಕಾರ್ಡನ್ನು ಪರಿಚಯಿಸಲಾಗುತ್ತಿದ್ದು, ಸಮಾಜದ ಎಲ್ಲಾ ವರ್ಗಗಳಿಗೂ ಇದು ಅನುಕೂಲವಾಗುತ್ತದೆ. ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯರಾಗಿ ಪ್ರಯೋಜನಗಳನ್ನು ಪಡೆಯಬಹುದು. ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಮಣಿಪಾಲ್ ಆರೋಗ್ಯ ಕಾರ್ಡಿನ ಧ್ಯೇಯವಾಕ್ಯವಾಗಿದೆ ಎಂದರು.
ಸದಸ್ಯತ್ವ ವಿವರಗಳು : ಮಣಿಪಾಲ್ ಆರೋಗ್ಯ ಕಾರ್ಡ್ 2025ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 350, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ. 700 ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. 900. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 600, ಕುಟುಂಬಕ್ಕೆ ರೂ. 950 ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ.1100 ಆಗಿರುತ್ತದೆ ಎಂದರು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಾರ್ಡ್‍ದಾರರಿಗೆ ರಿಯಾಯಿತಿ ಪ್ರಯೋಜನಗಳು

ತಜ್ಞ ಮತ್ತು ಸೂಪರ್-ಸ್ಪೆಷಲಿಸ್ಟ್ ಸಮಾಲೋಚನೆ ಶುಲ್ಕಗಳಲ್ಲಿ 50% ರಿಯಾಯಿತಿ (ಓಪಿಡಿ ದಿನಗಳು), ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆಗಳ ಮೇಲೆ 25% ರಿಯಾಯಿತಿ, ರೇಡಿಯಾಲಜಿ, ಓಪಿಡಿ ಕಾರ್ಯವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯ ಮೇಲೆ 20% ರಿಯಾಯಿತಿ, ಡಯಾಲಿಸಿಸ್‍ನಲ್ಲಿ ರೂ. 100 ರಿಯಾಯಿತಿ, ಆಸ್ಪತ್ರೆ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡ್ ಒಳರೋಗಿಗಳ ಬಿಲ್‍ಗಳಲ್ಲಿ 25% ರಿಯಾಯಿತಿ (ಉಪಭೋಗ್ಯ ವಸ್ತುಗಳು ಮತ್ತು ಪ್ಯಾಕೇಜ್‍ಗಳನ್ನು ಹೊರತುಪಡಿಸಿ) ನೀಡಲಾಗುತ್ತದೆ ಎಂದರು.
ಕಾರ್ಡ್‍ದಾರರು ಕಸ್ತೂರ್ಬಾ ಆಸ್ಪತ್ರೆ-ಮಣಿಪಾಲ, ಡಾ.ಟಿಎಂಎ ಪೈ ಆಸ್ಪತ್ರೆ-ಉಡುಪಿ, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ-ಕಾರ್ಕಳ, ಕೆಎಂಸಿ ಆಸ್ಪತ್ರೆ-ಮಂಗಳೂರು ಮತ್ತು ಅತ್ತಾವರ, ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ-ಕಟೀಲು, ಮಣಿಪಾಲ ಆಸ್ಪತ್ರೆ-ಗೋವಾ ಮತ್ತು ಮಣಿಪಾಲ ಹಾಗೂ ಮಂಗಳೂರಿನಲ್ಲಿನ ದಂತ ಕಾಲೇಜುಗಳಲ್ಲಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಮತ್ತು ಮಂಗಳೂರಿನಲ್ಲಿ ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿಗಳು ಮತ್ತು ಹೆಚ್ಚಿನ ಮಾಹಿತಿಗಾಗಿ,

www.manipalhealthcard.comಗೆ ಭೇಟಿ ನೀಡಿ ಅಥವಾ 9980854700, 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು ಎಂದರು.

2025ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ

ಶಿವಮೊಗ್ಗ : ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ನವೀನ ಟೈಯರ್ಸ್, ವಿನೋಭನಗರದ ನವೀನ್ ಕೆ.ಆರ್. 7829540338, ಪ್ರತಿನಿಧಿಗಳಾದ ವಿಜಯ್ ಆನಂದ್, 9844383344, ಬಾಪೂಜಿ ಎಂ. 9916131880, ಬಾಲಕೃಷ್ಣ ಭಟ್-8792128878 ವಿಪ್ರ ಸೌಹಾರ್ದ, 9242373839, ಸೇಂಟ್ ಮಿಲಾಗ್ರೆಸ್ ಸೌಹಾರ್ದ 9538400604, ಕೃಷಿಕ್ ಸೌಹಾರ್ದ, 9686264966, ಶಾರದ ಸೌಹಾರ್ದ- 9880838430, ನಿತಿನ್ ಎಸ್.ಮೂರ್ತಿ: 9480028241, ಕಸ್ತೂರ್ಬಾ ಆಸ್ಪತ್ರೆ ಮಾಹಿತಿ ಕೇಂದ್ರ, ಗಾಂಧಿ ಬಜಾರ್, ಪ್ರವೀಣ್ ಎಸ್. ನವಲೆ-9980731051 ಮತ್ತು ಹತ್ತಿರದ ಅಧಿಕೃತ ಪ್ರತಿನಿಧಿಗಳಲ್ಲಿ ನೊಂದಾಯಿಸಿಕೊಳ್ಳಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ಪ್ರತಿನಿಧಿಯಾದ ಅನಿಲ್, ಸಂದೀಪ್, ಪ್ರತಿನಿದಿಗಳಾದ ನವೀನ್ ಮತ್ತು ವನಿತಾ, ಬಾಲಕೃಷ್ಣ ಭಟ್ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsManipal Health CardNews_in_KannadaNews_KannadaShimogaShivamoggaNewsಮಣಿಪಾಲ್ ಆರೋಗ್ಯ ಕಾರ್ಡ್-2025ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

Next Post

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

kalpa News

kalpa News

Next Post
ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL