ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಈ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲೂ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿಕಾರಿಪುರದಲ್ಲಿ ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಎಲ್ಲಿಯೂ ಪ್ರಚಾರದಲ್ಲಿ ವೈಯಕ್ತಿಕ ಟೀಕೆ ಮಾಡಿಲ್ಲ. ಕಾಂಗ್ರೆಸ್ ನಾಯಕರ ಎಲ್ಲ ಟೀಕೆಗೆ ಚುನಾವಣೆ ಫಲಿತಾಂಶ ಉತ್ತರ ನೀಡಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರ:
ಸಚಿವ ಸಂಪು ವಿಸ್ತರಣೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ಬಿ.ವೈ. ವಿಜಯೇಂದ್ರ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕುರಿತು ಬಿಎಸ್‌ವೈ ಮೌನ ವಹಿಸಿದರು.
ಮತದಾನಕ್ಕೂ ಮುನ್ನ ಪಕ್ಷದ ಅಭ್ಯರ್ಥಿ ಡಿ.ಎಸ್. ಅರುಣ್ ಅವರೊಂದಿಗೆ ಹುಚ್ಚರಾಯ ಸ್ವಾಮಿ ದೇವಾಲಯಕ್ಕೆ ತೆರಳಿದ ಬಿಎಸ್‌ವೈ ವಿಶೇಷ ಪೂಜೆ ಸಲ್ಲಿಸಿದರು.
ಇದಕ್ಕೂ ಮುನ್ನ ಬಿಎಸ್’ವೈ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಂಸದ ರಾಘವೇಂದ್ರ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post