ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಹರಡುವುದು ನಿಯಂತ್ರಿಸುವ ಉದ್ದೇಶದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಪುನಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗಿರುವುದನ್ನು ಮನಗಂಡು ಸರ್ಕಾರ ನರೇಗಾ ಯೋಜನೆಯನ್ನು ಪುನಾರಂಭಿಸಲು ನಿರ್ಧರಿಸಿದೆ. ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನ ಕುರಿತಾಗಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಇದರ ಪ್ರಕಾರ ಒಂದು ಸ್ಥಳದಲ್ಲಿ ಗರಿಷ್ಟ ೪೦ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಕೂಲಿ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ತಿಳಿಸಲಾಗಿದೆ. ಕೂಲಿ ಮೊತ್ತವನ್ನು ಹೆಚ್ಚಿಸಲಾಗಿದ್ದು ಒಟ್ಟು 299 ರೂ. ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post