No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.17-20ರವರೆಗೆ ಕೃಷಿ ಮತ್ತು ತೋಟಗಾರಿಕಾ ಮೇಳ: ಸಿಎಂ ಬೊಮ್ಮಾಯಿ ಚಾಲನೆ

kalpa News by kalpa News
March 15, 2023
in ಶಿವಮೊಗ್ಗ
0
ಫೆ.29ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಐದನೆಯ ಘಟಿಕೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಗೆ ವಿಜ್ಞಾನಗಳ ವಿಶ್ವ ವಿದ್ಯಾಲಯವು ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಮಾ.17ರಿಂದ 20ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2023ನ್ನು ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ವಿವಿಯ ಕುಲಪತಿ ಡಾ.ಆರ್.ಸಿ. ಜಗದೀಶ್ ತಿಳಿಸಿದರು.

ಅವರು ಇಂದು ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಏಳು ಜಿಲ್ಲೆಗಳು ಬರಲಿದ್ದು, ಈಗ ನಡೆಯುತ್ತಿರುವ ಮೇಳ 8ನೇ ಮೇಳವಾಗಿದೆ ಎಂದರು.
`ಸುಸ್ಥಿರ ಆದಾಯಕ್ಕಾಗಿ – ಸೆಕೆಂಡರಿ ಕೃಷಿ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆ’ ಎಂಬ ಧ್ಯೇಯದೊಂದಿಗೆ ಈ ವರ್ಷದ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಕೃಷಿ ವಸ್ತುಪ್ರದರ್ಶನ, ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆಯ ಸಸ್ಯಕಾಶಿಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಿವಿ ವ್ಯಾಪ್ತಿಗೆ ಬರುವ ಏಳು ಜಿಲ್ಲೆಗಳಿಂದ ಕೃಷಿ ಮತ್ತು ತೋಟಗಾರಿಕೆಯಲ್ಲಿ ಸಾಧನೆಗೈದ ರೈತರು ಮತ್ತು ರೈಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.

ಮೇಳದಲ್ಲಿ ವಿವಿಧ ನವೀನ ತಾಂತ್ರಿಕತೆಗಳು ಮತ್ತು ವಿವಿಧ ಬೆಳೆಗಳ ಹೊಸ ಹೊಸ ತಳಿಗಳ ಬಿಡುಗಡೆ, ಅಲ್ಲದೆ ರೈತ ಸಮೂಹಕ್ಕೆ ಮಾಹಿತಿಗಾಗಿ ವಿವಿಧ ಬೆಳೆ ಮತ್ತು ತಾಂತ್ರಿಕತೆಗಳನ್ನು ಹೊತ್ತ ತಾಂತ್ರಿಕ ಕೈಪಿಡಿಗಳ ಬಿಡುಗಡೆ ಮಾಡಲಾಗುತ್ತಿದೆ. ಕೃಷಿ ಪರಿಕರ ವಿತರಕರು, ವಿಜ್ಞಾನಿಗಳು ಹಾಗೂ ಪ್ರಗತಿಪರ ರೈತಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಸಂವಾದ ಏರ್ಪಡಿಸಲಾಗಿದೆ ಎಂದರು.
ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿಪದ್ಧತಿ, ಸಂರಕ್ಷಿತ ಕೃಷಿ, ಹೈಟೆಕ್ ತೋಟಗಾರಿಕೆ-ಹೈಡ್ರೋಫೋನಿಕ್ ಕೃಷಿ, ಪುಷ್ಪಕೃಷಿ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಜೇನು ಸಾಕಾಣಿಕೆ, ಸಿರಿ ಧಾನ್ಯಗಳ ಮಹತ್ವ, ಕೃಷಿ-ತೋಟಗಾರಿಕೆ-ಅರಣ್ಯ ಸಮಗ್ರ ಪದ್ಧತಿಗಳು, ಸಾವಯವ ಕೃಷಿ, ಅಣಬೆ ಬೇಸಾಯ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂರಕ್ಷಣೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಹನಿ ಮತ್ತು ತುಂತುರು ನೀರಾವರಿ ಪದ್ಧತಿ, ಹವಾಮಾನ ಆಧಾರಿತಕೃಷಿ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ಸೇರಿದಂತೆ ಇನ್ನಿತರೆ ಮೇಳದ ವಿಶೇಷತೆಗಳಾಗಿವೆ ಎಂದರು.

Also read: ಕಾರಿನ ಟೈರ್ ಸ್ಪೋಟಗೊಂಡು ಅಪಘಾತ: ಚಾಲಕ ಸ್ಥಳದಲ್ಲೇ ಸಾವು

2023 ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವಾಗಿರುವುದರಿಂದ ಸಿರಿಧಾನ್ಯಗಳ ಕುರಿತು ನೀತಿಗಳು ಮತ್ತು ಕಾರ್ಯಗಳು, ಪೌಷ್ಠಿಕ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮಲ್ಲಿ ರೋಗನಿರೋಧಕ ಸಾಮರ್ಥ್ಯ ಹೆಚ್ಚಳದ ಬಗ್ಗೆ, ಸಿರಿಧಾನ್ಯಗಳ ಪ್ರಚಾರ ಮತ್ತು ಬಳಕೆಯಲ್ಲಿ ಭಾರತದ ಸಾಧನೆ, ಸಿರಿಧಾನ್ಯಗಳ ಪೌಷ್ಠಿಕಾಂಶ, ಪರಿಸರ ಮತ್ತು ಆರ್ಥಿಕ ಪ್ರಯೋಜನಗಳ ಬಗ್ಗೆ ಮೇಳದಲ್ಲಿ ಜಾಗೃತಿ ಮೂಡಿಸುವ ಗುರಿ ಹೊಂದಲಾಗಿದೆ ಎಂದರು.
ಮಾ.17ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಳವನ್ನು ಉದ್ಘಾಟಿಸಲಿದ್ದು, ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ರೇಷ್ಠ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದರು.

ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಸ್ತುಪ್ರದರ್ಶನವನ್ನು, ಶಾಸಕ ಕೆ.ಎಸ್. ಈಶ್ವರಪ್ಪ ತಂತ್ರಜ್ಞಾನ ಉದ್ಯಾನವನ ಉದ್ಘಾಟಿಸುವರು. ಸಂಸದ ಬಿ.ವೈ. ರಾಘವೇಂದ್ರ ತಾಂತ್ರಿಕತೆ ಮತ್ತು ತಳಿಗಳ ಬಿಡುಗಡೆ ಮಾಡುವರು. ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಶಾಸಕ ಕೆ.ಬಿ. ಅಶೋಕ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ ಎಂದ ಅವರು, ಅಂದು ಮಧ್ಯಾಹ್ನ 2-30ರಿಂದ ಅಡಿಕೆ ಕೃಷಿಯ ಸವಾಲುಗಳು ಕುರಿತು ತಾಂತ್ರಿಕ ಸಮಾವೇಶ ನಡೆಯಲಿದೆ. ಸಂಜೆ 6:30ರಿಂದ ಮನರಂಜನಾ ಕಾರ್ಯಕ್ರಮ ನಡೆಯಲಿದೆ ಎಂದರು.

ಮಾ.18ರ ಬೆಳಿಗ್ಗೆ 11 ಗಂಟೆಗೆ ನಡೆಯುವ ತಾಂತ್ರಿಕ ಸಮಾವೇಶ ಹಾಗೂ ತಾಂತ್ರಿಕ ಕೈಪಿಡಿಗಳ ಬಿಡುಗಡೆ ಸಮಾರಂಭದ ಸಾನಿಧ್ಯವನ್ನು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಉದ್ಘಾಟಿಸಲಿದ್ದಾರೆ. ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ತಾಂತ್ರಿಕ ಕೈಪಿಡಿಗಳ ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಯಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು, ಏಳು ಜಿಲ್ಲೆಗಳ ಸಂಸದರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 2:30ರಿಂದ ಸೆಕೆಂಡರಿ ಕೃಷಿ ಮತ್ತು ಮೌಲ್ಯವರ್ಧನೆ ಕುರಿತು ತಾಂತ್ರಿಕ ಸಮಾವೇಶ ನಡೆಯಲಿದೆ ಎಂದರು.

ಮಾ.19ರ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದ ಸಾನಿಧ್ಯವನ್ನು ನಂದವೇರಿ ಮಠದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ವಹಿಸಲಿದ್ದು, ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಸಚಿವ ಎಸ್.ಅಂಗಾರ ಕೈಪಿಡಿಗಳ ಬಿಡುಗಡೆ ಮಾಡುವರು. ಸಚಿವ ಅರಬೈಲ್ ಶಿರಾಮ್ ಹೆಬ್ಬಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಧ್ಯಾಹ್ನ 2:30ರಿಂದ ಸಿರಿಧಾನ್ಯಗಳ ಮಹತ್ವ ಮತ್ತು ಸಮಗ್ರ ಕೃಷಿ ಪದ್ಧತಿಗಳು ಕುರಿತು ತಾಂತ್ರಿಕ ಸಮಾವೇಶ ನಡೆಯಲಿದೆ ಎಂದರು.
ಮಾ.20ರ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯವನ್ನು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಹಿಸಲಿದ್ದು, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಸಮಾರಂಭ ಉದ್ಘಾಟಿಸುವರು. ಸಚಿವ ವಿ. ಸುನಿಲ್‌ಕುಮಾರ್ ಉತ್ತಮ ಮಳಿಗೆ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ಕೆ.ಬಿ. ಅಶೋಕ ನಾಯ್ಕ ಅದ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮೇಳದಲ್ಲಿ ಮಾ.19ರ ಬೆಳಿಗ್ಗೆ 9:30ರಿಂದ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನವನ್ನು ಏರ್ಪಡಿಸಿದ್ದು, ಅತ್ಯುತ್ತಮ ಶ್ವಾನಗಳಿಗೆ ನಗದು ಬಹುಮಾನ ನೀಡಲಾಗುವುದು. ಮಾ17ರ ಒಳಗೆ 100ರೂ. ಶುಲ್ಕ ನೀಡಿ ಹೆಸರು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9844014063, 9448318878ರಲ್ಲಿ ಸಂಪರ್ಕಿಸಬಹುದು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ವಿವಿಯ ಸಂಶೋಧನಾ ನಿರ್ದೇಶಕ ಡಾ. ಮೃತ್ಯುಂಜಯ ಸಿ. ವಾಲಿ, ವಿಸ್ತರಣಾ ನಿರ್ದೇಶಕ ಡಾ. ಬಿ. ಹೇಮ್ಲಾ ನಾಯಕ್, ಡೀನ್ ಡಾ. ಬಿ.ಎಂ. ದುಶ್ಯಂತ್‌ಕುಮಾರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಬೈಂದೂರಿನಲ್ಲಿ ಬೃಹತ್ ರೋಡ್ ಶೋ

Next Post

ಕರ್ತವ್ಯ ಲೋಪ ಕಂಡುಬಂದಲ್ಲಿ ಮುಲಾಜಿಲ್ಲದೆ ಕ್ರಮ: ಲೋಕಾಯುಕ್ತ ಎಸ್‌ಪಿ ಖಡಕ್ ಎಚ್ಚರಿಕೆ

kalpa News

kalpa News

Next Post
ಕರ್ತವ್ಯ ಲೋಪ ಕಂಡುಬಂದಲ್ಲಿ ಮುಲಾಜಿಲ್ಲದೆ ಕ್ರಮ: ಲೋಕಾಯುಕ್ತ ಎಸ್‌ಪಿ ಖಡಕ್ ಎಚ್ಚರಿಕೆ

ಕರ್ತವ್ಯ ಲೋಪ ಕಂಡುಬಂದಲ್ಲಿ ಮುಲಾಜಿಲ್ಲದೆ ಕ್ರಮ: ಲೋಕಾಯುಕ್ತ ಎಸ್‌ಪಿ ಖಡಕ್ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL