ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ Agricultural University 8ನೆಯ ಘಟಿಕೋತ್ಸವವು ಜುಲೈ 21ರಂದು ಸಾಗರ ತಾಲೂಕಿನ ಇರುವಕ್ಕಿಯಲ್ಲಿ ನಡೆಯಲಿದೆ.
ಈ ಕುರಿತಂತೆ ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ವಿವಿ ಕುಲಪತಿ ಪ್ರೊ.ಆರ್.ಸಿ. ಜಗದೀಶ್, ಅಂದು ಸಂಜೆ 4 ಗಂಟೆಗೆ ಘಟಿಕೋತ್ಸವ ನಡೆಯಲಿದೆ. ವಿವಿ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್, Governor Thawarchand Gehlot ಕೃಷಿ ಸಚಿವ ಹಾಗೂ ವಿವಿ ಸಹ ಕುಲಾಧಿಪತಿಗಳಾಗಿರುವ ಎಸ್. ಚೆಲುವರಾಯ ಸ್ವಾಮಿ Minister Cheluvaraya Swamy ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಎಸ್. ವೀರೇಂದ್ರ ಹೆಗ್ಗಡೆ Dr. Veerendra Heggade ಪಾಲ್ಗೊಳ್ಳಲಿದ್ದಾರೆ ಎಂದರು.

ಎಷ್ಟು ವಿದ್ಯಾರ್ಥಿಗಳಿಗೆ ಪದವಿ?
ಘಟಿಕೋತ್ಸವದಲ್ಲಿ 409 ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ಪದವಿ ಹಾಗೂ 101 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ 23 ವಿದ್ಯಾರ್ಥಿಗಳು ಪಿಎಚ್’ಡಿ ಪದವಿ ಪಡೆಯುತ್ತಿದ್ದಾರೆ.

ಅತ್ಯುತ್ತಮ ಶೈಕ್ಷಣಿಕ ಸಾಧನೆಮಾಡಿದ 08 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಅವರಿಗೆ ಒಟ್ಟು 15 ಚಿನ್ನದ ಪದಕಗಳನ್ನು ನೀಡಲಾಗುವುದು. 14 ಎಂಎಸ್ಸಿ ವಿದ್ಯಾರ್ಥಿಗಳು, 07 ಪಿಎಚ್’ಡಿ ವಿದ್ಯಾರ್ಥಿಗಳು ಚಿನ್ನದ ಸಾಧನೆ ಮಾಡಿದ್ದಾರೆ. ಘಟಿಕೋತ್ಸವದಲ್ಲಿ ಒಟ್ಟು 37 ಚಿನ್ನದ ಪದಕಗಳನ್ನು ನೀಡಲಾಗುವುದು ಎಂದರು.
Also read: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ನಿರ್ಮಿಸಿ: ವಿಹೆಚ್‌ಪಿ – ಬಜರಂಗ ದಳ ಮನವಿ
ವಿಶ್ವವಿದ್ಯಾಲಯದಲ್ಲಿ ಈ ವರ್ಷ ಹಲವಾರು ವಿಶಿಷ್ಟ ಸಾಧನೆಗಳನ್ನು ಮಾಡಲಾಗಿದೆ. ರಾಷ್ಟ್ರೀಯ ಉನ್ನತ ಶಿಕ್ಷಣ ಪ್ರಾಯೋಜನೆಯಡಿ ದೇಶದ ಕೃಷಿ ವಿಶ್ವವಿದ್ಯಾಲಯಗಳಲ್ಲೇ ಮೊದಲ ಬಾರಿಗೆ ಐಓಟಿ ಸ್ಮಾರ್ಟ್ ಕೃಷಿ, ತೋಟಗಾರಿಕೆ, ಅರಣ್ಯ ವಿಷಯಗಳನ್ನು ಪ್ರಾಯೋಗಿಕ ಕಲಿಕೆ ಪ್ರಾರಂಭಿಸಿದ್ದು 20 ವಿದ್ಯಾರ್ಥಿಗಳ ಮೊದಲ ತಂಡ ಇದನ್ನು ಪೂರ್ಣಗೊಳಿಸಿದ್ದಾರೆ ಎಂದರು.

ಕುಲಸಚಿವ ಪ್ರೊ.ಕೆ.ಸಿ. ಶಶಿಧರ, ಪ್ರೊ. ಹೇಮ್ಲಾ ನಾಯ್ಕ ಇದ್ದರು.










Discussion about this post