No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಔಷಧ ಸಂಶೋಧನೆಗೆ ಎಐ ಹೊಸ ದಾರಿ: ಡಾ. ತಿಪ್ಪೇಸ್ವಾಮಿ

ಔಷಧ ಮಹಾವಿದ್ಯಾಲಯದಲ್ಲಿ 2ನೇ ರಾಷ್ಟ್ರೀಯ ಫಾರ್ಮಕಾಲಜಿ ದಿನಾಚರಣೆ

kalpa News by kalpa News
August 9, 2026
in ಶಿವಮೊಗ್ಗ
0
Shivamogga: AI Playing a Key Role in Drug Research
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಉತ್ತಮ ಆರೋಗ್ಯಕ್ಕಾಗಿ ಹೊಸ ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮಹತ್ವದ ಪಾತ್ರ ವಹಿಸುತ್ತಿದ್ದು, ಔಷಧ ಸಂಶೋಧನಾ ಕ್ಷೇತ್ರದಲ್ಲಿ ಹೊಸ ಸಾಧ್ಯತೆಗಳಿಗೆ ದಾರಿ ತೆರೆದಿದೆ ಎಂದು ಸೌದಿ ಅರೇಬಿಯಾದ ಶಾಖ್ರಾ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಫಾರ್ಮಸಿ, (Pharmacy) ಔಷಧಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ತಿಪ್ಪೇಸ್ವಾಮಿ ಬಿ.ಎಸ್ ಶಿವಮೊಗ್ಗದಲ್ಲಿ (Shivamogga) ಹೇಳಿದರು.

ನಗರದ (Shivmogga) ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಔಷಧಶಾಸ್ತ್ರ ವಿಭಾಗ ಹಾಗೂ ಇಂಡಿಯನ್ ಫಾರ್ಮಸಿ ಗ್ರಾಜುಯೇಟ್ಸ್ ಅಸೋಸಿಯೇಷನ್ ಮಹಿಳಾ ವೇದಿಕೆಯ ಕರ್ನಾಟಕ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ಭಾರತೀಯ ಔಷಧಶಾಸ್ತ್ರದ ಪಿತಾಮಹ ಸರ್ ರಾಮನಾಥ್ ಚೋಪ್ರಾ ಅವರ 144ನೇ ಜನ್ಮದಿನದ ಅಂಗವಾಗಿ 2ನೇ ರಾಷ್ಟ್ರೀಯ ಔಷಧಶಾಸ್ತ್ರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ವಿಜ್ಞಾನ ಮತ್ತು ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಔಷಧ ಸಂಶೋಧನಾ ಕ್ಷೇತ್ರದಲ್ಲಿಯೂ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿದೆ. ಅದರಲ್ಲೂ ಕೃತಕ ಬುದ್ಧಿಮತ್ತೆ ಹಾಗೂ ಯಂತ್ರ ಕಲಿಕೆ (ಮಷಿನ್ ಲರ್ನಿಂಗ್) ಔಷಧಗಳ ಸಂಶೋಧನೆ, ಅಭಿವೃದ್ಧಿ ಮತ್ತು ವಿಶ್ಲೇಷಣಾ ಪ್ರಕ್ರಿಯೆಯಲ್ಲಿ ಪ್ರಮುಖ ಸಾಧನಗಳಾಗಿ ರೂಪುಗೊಳ್ಳುತ್ತಿವೆ ಎಂದು ಅವರು ತಿಳಿಸಿದರು.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಔಷಧಗಳ ಪರಿಣಾಮ, ಅಡ್ಡಪರಿಣಾಮ ಪತ್ತೆಗೆ ಎಐ ಸಹಕಾರಿ

ಔಷಧಗಳ ಪರಿಣಾಮಕಾರಿತ್ವ, ಅಡ್ಡಪರಿಣಾಮಗಳು ಹಾಗೂ ಔಷಧಗಳ ನಡುವಿನ ಪರಸ್ಪರ ಕ್ರಿಯೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಎಐ ಪ್ರಮುಖವಾಗಿ ನೆರವಾಗುತ್ತಿದೆ. ಹೊಸ ಔಷಧಗಳ ಗುರಿಗಳನ್ನು ಕಡಿಮೆ ಅವಧಿಯಲ್ಲಿ ಗುರುತಿಸುವುದು, ವಿವಿಧ ಸಂಯುಕ್ತಗಳನ್ನು ವಿಶ್ಲೇಷಿಸುವುದು ಸೇರಿದಂತೆ ಹಲವು ಹಂತಗಳಲ್ಲಿ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದಾಗಿದೆ ಎಂದು ಡಾ. ತಿಪ್ಪೇಸ್ವಾಮಿ ವಿವರಿಸಿದರು.

ಔಷಧ ಸಂಶೋಧನೆಯಲ್ಲಿ ದೊಡ್ಡ ಪ್ರಮಾಣದ ದತ್ತಾಂಶವನ್ನು ಸಂಗ್ರಹಿಸಿ ವಿಶ್ಲೇಷಿಸುವ ಅಗತ್ಯವಿರುತ್ತದೆ. ಈ ಕಾರ್ಯವನ್ನು ಸಾಂಪ್ರದಾಯಿಕ ವಿಧಾನಗಳಿಗಿಂತ ವೇಗವಾಗಿ ಮತ್ತು ಹೆಚ್ಚಿನ ನಿಖರತೆಯೊಂದಿಗೆ ನಿರ್ವಹಿಸಲು ಎಐ ಮತ್ತು ಯಂತ್ರ ಕಲಿಕೆ ಸಹಕಾರಿಯಾಗುತ್ತವೆ. ಇದರಿಂದ ಸಂಶೋಧಕರ ಸಮಯ ಮತ್ತು ಸಂಪನ್ಮೂಲಗಳ ಉಳಿತಾಯವಾಗುವುದರ ಜತೆಗೆ, ಹೊಸ ಔಷಧಗಳ ಅಭಿವೃದ್ಧಿ ಪ್ರಕ್ರಿಯೆಯನ್ನು ವೇಗಗೊಳಿಸಲು ಸಾಧ್ಯವಾಗುತ್ತದೆ ಎಂದರು.

ಜೀನ್‌, ಪ್ರೋಟೀನ್‌ಗಳ ಅಧ್ಯಯನಕ್ಕೂ ನೆರವು

ಔಷಧಗಳು ವಿವಿಧ ಜೀನ್‌ಗಳು, ಪ್ರೋಟೀನ್‌ಗಳು ಮತ್ತು ಜೈವಿಕ ಮಾರ್ಗಗಳ ಮೇಲೆ ಬೀರುವ ಒಟ್ಟಾರೆ ಪರಿಣಾಮವನ್ನು ಅರ್ಥಮಾಡಿಕೊಳ್ಳಲು ಜಾಲರೂಪದ ಔಷಧ ವಿಜ್ಞಾನ (ನೆಟ್‌ವರ್ಕ್ ಫಾರ್ಮಕಾಲಜಿ) ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

Also read>> ಎರಡನೇ ಬಾರಿ ಸಚಿವರಾಗಿ ಮಧು ಶಿವಮೊಗ್ಗದಲ್ಲಿ ಮೊದಲ ಮಹತ್ವದ ಸಭೆ | ಏನೆಲ್ಲಾ ಸೂಚನೆ ಕೊಟ್ರು?

ಎಐ ಆಧಾರಿತ ಯಂತ್ರ ಕಲಿಕೆಯ ವಿವಿಧ ವಿಧಾನಗಳನ್ನು ಔಷಧೀಯ ದತ್ತಾಂಶದ ವಿಶ್ಲೇಷಣೆಗೆ ಬಳಸಬಹುದು. ಎಐ ಮೇಲ್ವಿಚಾರಿತ ಯಂತ್ರ ಕಲಿಕೆಯಲ್ಲಿ ಬಳಸುವ ಬೆಂಬಲ ವಾಹಕ ಯಂತ್ರ (ಸಪೋರ್ಟ್ ವೆಕ್ಟರ್ ಮೆಷಿನ್) ವಿಧಾನದ ಮೂಲಕ ಔಷಧೀಯ ದತ್ತಾಂಶವನ್ನು ವಿಶ್ಲೇಷಿಸಿ ವಿವಿಧ ಮಾದರಿಗಳನ್ನು ಗುರುತಿಸಬಹುದಾಗಿದೆ. ಅದೇ ರೀತಿ, ಮೇಲ್ವಿಚಾರಣೆಯಿಲ್ಲದ ಯಂತ್ರ ಕಲಿಕೆಯ ಮೂಲಕ ದತ್ತಾಂಶದಲ್ಲಿ ಅಡಗಿರುವ ಗುಪ್ತ ಮಾದರಿಗಳು, ಸಂಬಂಧಗಳು ಹಾಗೂ ಪ್ರಮುಖ ಅಂಶಗಳನ್ನು ಪತ್ತೆಹಚ್ಚಲು ಸಾಧ್ಯವಿದೆ ಎಂದು ವಿವರಿಸಿದರು.PES Shivamogga

ಔಷಧವಿಜ್ಞಾನ ಜತೆ ಎಐ ಜ್ಞಾನವೂ ಅಗತ್ಯ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್.ಎನ್. ಶ್ರೀಹರ್ಷ ಮಾತನಾಡಿ, ‘ಉತ್ತಮ ಆರೋಗ್ಯಕ್ಕಾಗಿ ಔಷಧ ಸಂಶೋಧನೆಗೆ ಉತ್ತೇಜನ’ ಎಂಬ ಆಶಯದೊಂದಿಗೆ ರಾಷ್ಟ್ರೀಯ ಔಷಧಶಾಸ್ತ್ರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಇಂದಿನ ತಂತ್ರಜ್ಞಾನ ಯುಗದಲ್ಲಿ ಔಷಧವಿಜ್ಞಾನದ ಜ್ಞಾನದ ಜತೆಗೆ ಕೃತಕ ಬುದ್ಧಿಮತ್ತೆ ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ಜ್ಞಾನವನ್ನು ಸಮನ್ವಯಗೊಳಿಸಿದಾಗ ಔಷಧ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೊಸ ಸಾಧ್ಯತೆಗಳನ್ನು ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಎಐ ನೆರವಿನಿಂದ ದೊಡ್ಡ ಪ್ರಮಾಣದ ದತ್ತಾಂಶವನ್ನು ಅತ್ಯಂತ ವೇಗವಾಗಿ ವಿಶ್ಲೇಷಿಸಲು ಸಾಧ್ಯವಾಗುತ್ತದೆ. ಇದರಿಂದ ಸಂಶೋಧನೆಯ ನಿಖರತೆ ಹೆಚ್ಚಿಸುವುದರ ಜತೆಗೆ ಪರಿಣಾಮಕಾರಿ ಔಷಧಗಳ ಅಭಿವೃದ್ಧಿ ಪ್ರಕ್ರಿಯೆಯನ್ನು ಮತ್ತಷ್ಟು ಸುಧಾರಿಸಬಹುದು. ಈ ಹಿನ್ನೆಲೆಯಲ್ಲಿ ಔಷಧವಿಜ್ಞಾನ ಕ್ಷೇತ್ರದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಸಂಶೋಧಕರು ಆಧುನಿಕ ತಂತ್ರಜ್ಞಾನಗಳ ಬಗ್ಗೆ ಅಗತ್ಯ ಜ್ಞಾನವನ್ನು ಹೊಂದುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಔಷಧಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜೆ.ಎಚ್. ವಿರೂಪಾಕ್ಷ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNES Pharmacy CollegeNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಎರಡನೇ ಬಾರಿ ಸಚಿವರಾಗಿ ಮಧು ಶಿವಮೊಗ್ಗದಲ್ಲಿ ಮೊದಲ ಮಹತ್ವದ ಸಭೆ | ಏನೆಲ್ಲಾ ಸೂಚನೆ ಕೊಟ್ರು?

Next Post

ಶಿವಮೊಗ್ಗ | ವಿಚಾರಣಾಧೀನ ಕೈದಿಯನ್ನು ಭೇಟಿಯಾಗಲು ರುಕ್ಸಾರ, ಖುರೇಷಿ ಅರೆಸ್ಟ್ | ಕಾರಣ ಮಾತ್ರ ಶಾಕಿಂಗ್!

kalpa News

kalpa News

Next Post
Shivamogga Prison 2 Arrested for Smuggle Banned Items

ಶಿವಮೊಗ್ಗ | ವಿಚಾರಣಾಧೀನ ಕೈದಿಯನ್ನು ಭೇಟಿಯಾಗಲು ರುಕ್ಸಾರ, ಖುರೇಷಿ ಅರೆಸ್ಟ್ | ಕಾರಣ ಮಾತ್ರ ಶಾಕಿಂಗ್!

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL