ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಂದು ವಾಯು ಸೇನೆಯ ವಿಐಪಿ ವಿಮಾನ ಬಿಂದಿಳಿಯಲಿದ್ದು, ಟ್ರಯಲ್ ರನ್ ನಡೆಸಲಾಗುತ್ತದೆ ಎಂದು ಸಂಸದ ರಾಘವೇಂದ್ರ MP Raghavendra ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ದಾವಣಗೆರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆ ಇಂದು ಸಂಜೆ ವೇಳೆಗೆ ವಾಯು ಸೇನೆಯ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣ ಆಗಮಿಸಿ ಟ್ರಯಲ್ ರನ್ ಮಾಡಲಿದೆ ಎಂದು ತಿಳಿಸಿದರು.
Also read: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲೋಹದ ಹಕ್ಕಿಗಳ ಹಾರಾಟಕ್ಕೆ ಸಿದ್ಧತೆ: ಸಂಸದ ರಾಘವೇಂದ್ರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post