ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಈ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಇರಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಕೇಂದ್ರದಿಂದ ಅನುಮೋದನೆ ದೊರೆಯುವ ನಿರೀಕ್ಷೆಯಿದೆ ಎಂದಿದ್ದಾರೆ.
ಈ ವಿಮಾನ ನಿಲ್ದಾಣ ಸ್ಥಾಪನೆಯಾಗುವ ಹಿಂದೆ ಯಡಿಯೂರಪ್ಪ ಅವರ ಅಪಾರ ಶ್ರಮ ಹಾಗೂ ಆಸಕ್ತಿಯಿದೆ. ಹೀಗಾಗಿ, ಅವರ ಹೆಸರನ್ನೇ ಇರಿಸಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post