ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಆಕಾಶವಾಣಿ ನಿವೃತ್ತ ಅಧಿಕಾರಿ, ಕಲ್ಪ ಮೀಡಿಯಾ ಹೌಸ್ ಹಿರಿಯ ಸಲಹಾ ಸಂಪಾದಕರಾದ ಡಾ. ಎನ್. ಸುಧೀಂದ್ರ ಅವರ ತಾಯಿ ವಿಮಲಮ್ಮ (90) ಇಂದು ನಸುಕಿನಲ್ಲಿ ವಿಧಿವಶರಾದರು.
ಹಲವು ದಿನಗಳಿಂದ ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಮೃತರು 6 ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇಂದು ಸಂಜೆ ಚನ್ನಗಿರಿಯಲ್ಲಿ ನಡೆಯಲಿದೆ.
ವಿಮಲಮ್ಮನವರು ಸಾಂಪ್ರದಾಯಿಕ ಹಾಡುಗಳು, ರಂಗೋಲಿ ಸೇರಿದಂತೆ ವಿವಿಧ ರೀತಿಯ ಕಲೆಗಳಲ್ಲಿ ಪರಿಣಿತಿ ಹೊಂದಿದ್ದು, ಚನ್ನಗಿರಿ ತಾಲೂಕಿನಲ್ಲಿ ಪ್ರಖ್ಯಾತಿ ಪಡೆದಿದ್ದರು.
ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಟಾಸ್ಕ್ ಫೋರ್ಸ್ ಸದಸ್ಯರಾದ ಲಕ್ಷ್ಮೀ ನಾರಾಯಣ ಕಾಶಿ, ಕಲ್ಪ ಮೀಡಿಯಾ ಹೌಸ್ ಹಿರಿಯ ಸಲಹಗಾರರಾದ ಮಂಜುನಾಥ ಶರ್ಮ ಹಾಗೂ ತಂಡ ಪ್ರಾರ್ಥಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post