ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬ್ರಾಹ್ಮಣ ಸಮುದಾಯದ ಎಲ್ಲರೂ ಒಂದಾಗಿ ಸಮಾಜದಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಸಲಹೆ ನೀಡಿದ್ದಾರೆ.
ಲೋಕಕಲ್ಯಾಣಾರ್ಥವಾಗಿ ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಆಯೋಜಿಸಲಾಗಿರುವ ಶ್ರೀಋಜು ಸಂಹಿತಾ ಯಾಗದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ಸಮಾಜದಲ್ಲಿ ಕೌಟುಂಬಿಕ ಮತ್ತು ಸಾಮಾಜಿಕವಾಗಿ ಕುಂದುಕೊರತೆ ಇದ್ದು, ಸಮಾಜ ಬೆಳೆಯಬೇಕಿದ್ದರೆ ವೈವಾಹಿಕ ಸಂಕಷ್ಟಗಳು ಮೊದಲು ಪರಿಹಾರವಾಗಬೇಕು. ಇಂತಹ ಸಂದರ್ಭದಲ್ಲಿ ಎಲ್ಲಾ ಬ್ರಾಹ್ಮಣರು ಒಂದಾಗಬೇಕು ಎಂದು ಕರೆ ನೀಡಿದರು.
ಎಲ್ಲಾ ರಂಗದಲ್ಲೂ ಬ್ರಾಹ್ಮಣ ಸಮಾಜ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಎಲ್ಲ ಸಮಾಜಕ್ಕಿಂತಲೂ ಬ್ರಾಹ್ಮಣ ಸಮಾಜದ ಮೇಲಿನ ಜವಾಬ್ದಾರಿ ಹೆಚ್ಚಿದೆ. ಎಲ್ಲ ಸಮುದಾಯಗಳನ್ನೂ ಒಟ್ಟಾಗಿ ಕೊಂಡೊಯ್ಯುವ ಜವಾಬ್ದಾರಿಯೂ ಸಹ ಇದೆ. ನಮ್ಮ ಜನಸಂಖ್ಯೆ ತೀವ್ರವಾಗಿ ಇಳಿಮುಖವಾಗಿದೆ ಪರಿಹಾರದ ಬಗ್ಗೆ ಚಿಂತಿಸಬೇಕಿದೆ. ಹೆಣ್ಣುಮಕ್ಕಳು ಇತರೆ ಜಾತಿಯವರನ್ನು ವರಿಸದಂತೆ ಮಾತೃಮಂಡಳಿ ರಚನೆಯ ಅವಶ್ಯಕತೆ ಇದೆ ಎಂದರು.
ಬ್ರಾಹ್ಮಣ ಹೆಣ್ಣು ಮಕ್ಕಳು ಬೇರೆ ಜಾತಿಯ ಹುಡುಗರನ್ನು ಮದುವೆಯಾಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಾರಣಗಳೇನು ಎಂಬುದನ್ನು ಹುಡುಕುವ ಕೆಲಸಗಳಾಗಬೇಕಿದೆ. ಅಲ್ಲದೇ, ವಿಪ್ರ ಸಮುದಾಯದ ಜನಸಂಖ್ಯೆ ಕಡಿಮೆಯಾಗುತ್ತಿರುವುದಕ್ಕೆ ಕಾರಣಗಳನ್ನು ಕಂಡು ಹಿಡಿದು, ಪರಿಹಾರ ಮಾಡುವ ಕೆಲಸವಾಗಬೇಕಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post