ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಮ್ಮ ಸರ್ಕಾರ ಘೋಷಿಸಿ, ಜಾರಿಗೊಳಿಸಿರುವ ಎಲ್ಲ ಗ್ಯಾರೆಂಟಿಗಳು ಜನರಿಗೆ ತಲುಪುತ್ತಿದ್ದು, ಬೇಕಾದವರು ಪರಿಶೀಲಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಪ್ರತಿಪಕ್ಷಗಳಿಗೆ ಚಾಟಿ ಬೀಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ Shivamogga Airport ಮಾತನಾಡಿದ ಅವರು, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರೆಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದರು.

Also read: ಅಯೋಧ್ಯೆಗೆ ತಾವು ಭೇಟಿ ನೀಡುವ ವಿಚಾರ | ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ
ಗ್ಯಾರೆಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ ಮಾಸಿಕ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿದ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ಹೆಚ್ಚಿಸುತ್ತವೆ ಎಂದಿದ್ದಾರೆ.

ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಈ ಎರಡು ವರ್ಷದೊಳಗೆ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ದೊರೆತಲ್ಲಿ ಯುವನಿಧಿ ಭತ್ಯೆಯನ್ನು ನೀಡಲಾಗುವುದಿಲ್ಲ. ಕೈಗಾರಿಕೆಗಳಲ್ಲಿ ಬೇಡಿಕೆಯಿರುವ ಕೌಶಲ್ಯದ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯ ಅವಧಿಯನ್ನು ಸಂಬಂಧಪಟ್ಟ ಇಲಾಖೆ ನಿರ್ಧರಿಸಲಿದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post