ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ದೂರ ಮಾಡಲು ಎಲ್ಲಾ ಕ್ರಮಕೈಗೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಅವರು ಇಂದು ಶಿವಮೊಗ್ಗ ಗ್ರಾಮಾಂತರ ತಾಲ್ಲೂಕಿನ ಕುಂಚೇನಹಳ್ಳಿಯಲ್ಲಿ ಕೋವಿಡ್ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈಗಾಗಲೇ ತಾಲ್ಲೂಕು ಆಡಳಿತದಿಂದ ಐಸೋಲೇಷನ್ ಸೆಂಟರ್‌ಗಳನ್ನು ಸಿದ್ಧಮಾಡಲಾಗಿದೆ. ಗ್ರಾಮಾಂತರ ಜನರು ಪ್ರಜ್ಞಾವಂತರು, ವಿದ್ಯಾವಂತರು, ಹೃದಯವಂತರು ಆಗಿದ್ದು, ಇಂತಹ ಸಂಕಷ್ಟ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿ ಗ್ರಾಮದಲ್ಲಿ ಕೋವಿಡ್ ಹರಡದಂತೆ ಎಲ್ಲರೂ ಜಾಗರುಕರಾಗಿರಬೇಕು ಎಂದರು.
ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಮಾತನಾಡಿ, ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮಾಂತರದಲ್ಲಿ ಮುಂಜಾಗ್ರತಾ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಧಿಕಾರಿಗಳು ಕುಂಚೇನಹಳ್ಳಿ ತಾಂಡ, ಸೋಮಿನಕೊಪ್ಪ ಸೇರಿದಂತೆ ಸುತ್ತಲಿನ ಗ್ರಾಮದಲ್ಲಿ ವಿಶೇಷ ಕಾಳಜಿವಹಿಸಿದ್ದಾರೆ ಎಂದರು.
ಗ್ರಾಮಾಂತರದಲ್ಲಿ ಒಟ್ಟು 748 ಸಕ್ರಿಯ ಪ್ರಕರಣಗಳಿದ್ದು, ಎಲ್ಲಾ ಪ್ರಕರಣಗಳಲ್ಲಿ ಚೇತರಿಕೆಯಾಗಿದೆ. ಒಂದೇ ಒಂದು ಸಾವು ಸಂಭವಿಸಿಲ್ಲ. ತಾಲ್ಲೂಕಿನಲ್ಲಿ ಒಟ್ಟು 700 ಬೆಡ್ ಐಸೋಲೇಷನ್ ಸೆಂಟರ್ಗಳನ್ನು ತೆರೆಯಲಾಗಿದ್ದು, ವಾಜಪೇಯಿ ಬಡಾವಣೆ, ಗೋಂಧಿಚಟ್ನಹಳ್ಳಿ ಮೊರಾರ್ಜಿ ಶಾಲೆ , ಕುಂಸಿ ಮೊರಾರ್ಜಿ ಶಾಲೆ , ನವುಲೆಯ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ಐಸೋಲೇಷನ್ ಸೆಂಟರ್ಗಳನ್ನು ತೆರೆಯಲಾಗಿದೆ. ಗ್ರಾಮದಲ್ಲಿ ಒಂದೇ ಒಂದು ಸೋಂಕು ಕಂಡು ಬಂದರು ಅವರನ್ನು ಮನವೊಲಿಸಿ ಪ್ರಾರ್ಥನೆ ಮಾಡಿ ಐಸೋಲೇಷನ್ ಸೆಂಟರ್ಗೆ ಕಳುಹಿಸಬೇಕು. ಮನೆಯಲ್ಲಿ ಐಸೋಲೇಷನ್ಗೆ ಇನ್ನು ಮುಂದೆ ಅವಕಾಶವಿಲ್ಲ. ಐಸೋಲೇಷನ್ ಸೆಂಟರ್ಗಳಲ್ಲಿ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆ. ಕೊರೋನಾ ಮುಕ್ತ ಗ್ರಾಮವನ್ನಾಗಿಸಲು ಎಲ್ಲರೂ ಸಂಕಲ್ಪ ತೊಡಬೇಕು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗರಾಜ್, ಸ್ಬೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಇಒ ಡಾ.ಕಲ್ಲಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಶೇಖರ್, ಸಿಪಿಐ ಸಂಜೀವ್ಕುಮಾರ್ ಹಾಗೂ ಕುಂಚೇನಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post