ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ #Lok Sabha Election ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ ಮತ್ತು ಇತರ ಪರಿಕರಗಳೊಂದಿಗೆ ತೆರಳಿದರು.
ನಗರದ ಎನ್‌ಇಎಸ್ ಮೈದಾನದಲ್ಲಿ ಇದಕ್ಕಾಗಿ ಸಿದ್ಧತೆ ನಡೆಸಲಾಗಿತ್ತು. ದೊಡ್ಡ ದೊಡ್ಡ ಶಾಮಿಯಾನ ಹಾಕಿ ಮತಗಟ್ಟೆಗಳ ಸಿಬ್ಬಂದಿಗಳು ಹೊರಡಲು ಅಣ ಯಾಗುವಂತೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಉಪಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ನೂರಾರು ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ತೆರಳುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಸರದಿ ಬರುವವರೆಗೂ ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

Also read: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಚುನಾವಣೆ: ಯಾವ್ಯಾವ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ?
ಲೋಕಸಭೆ ಚುನಾವಣೆಗೆ ಜಿಲ್ಲೆಯಲ್ಲಿ 1752885 ಮತದಾರರಿದ್ದು, ಈ ಪೈಕಿ 862789 ಪುರುಷ, 890061 ಮಹಿಳಾ ಮತದಾರರಿದ್ದಾರೆ. ಮತಗಟ್ಟೆಗೆ ಮತದಾರರನ್ನು ಸೆಳೆಯಲು 40 ಸಖಿ ಮತದಾನ ಕೇಂದ್ರಗಳು, ಯುವ ಮತದಾರರಿಗೆ 8, ವಿಶೇಷ ಚೇತನರಿಗೆ 8 ಮಾದರಿ ಮತಗಟ್ಟೆಗಳು, ಧ್ಯೇಯ ಆಧಾರಿತ 8 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮತದಾನ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ 2039 ಮತದಾನ ಕೇಂದ್ರಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಪ್ರಸ್ತುತ ಬಿಸಿಲು ಹೆಚ್ಚಾಗಿರುವುದ ರಿಂದ ಮತದಾರರಿಗೆ ಸನ್ ಸ್ಟ್ರೋಕ್ ತಪ್ಪಿಸಲು ನೆರಳಿನ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ವೈದ್ಯಕೀಯ ಕಿಟ್‌ನ ವ್ಯವಸ್ಥೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post