ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೋವಿಡ್ ಕಾರಣದಿಂದಾಗಿ ಅಂಬಿಗರ ಚೌಡಯ್ಯ ಜಯಂತಿಯನ್ನ ಸರಳವಾಗಿ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಚೌಡಯ್ಯನವರ ಜಯಂತಿಯನ್ನು ಸಂಭ್ರಮದಿಂದ ಆಚರಿಸೋಣ. ಬಸವಣ್ಣ ಮತ್ತು ಅಂಬಿಗರ ಚೌಡಯ್ಯನವರು ಬಿಟ್ಟು ಹೋಗಿರುವ ವಿಚಾರಗಳನ್ನ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಎಂದು ತಿಳಿಸಿದರು.
ಅವರ ಇಂದು ಕುವೆಂಪು ರಂಗ ಮಂದಿರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಕಾರ್ಯಕ್ರಮವನ್ನು ಪುಷ್ಪ ನಮನದ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮೇಯರ್ ಸುನಿತಾ ಅಣ್ಣಪ್ಪ ಮಾತನಾಡಿ ಅಂಬಿಗರ ಚೌಡಯ್ಯ ಜಯಂತಿ ಮತ್ತು ಬಸವಣ್ಣನವರ ಜಯಂತಿ ಒಂದು ಸಮಾಜಕ್ಕೆ ಸೀಮಿತವಾದುದ್ದಲ್ಲ. ಇವರುಗಳು ಸಮಾಜವನ್ನ ಮೀರಿ ಬದುಕಿದವರು ಇವರ ಆದರ್ಶ ಮತ್ತು ತತ್ವಗಳ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post