ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ #Janivara Row ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.
ರಾಜ್ಯ ಬ್ರಾಹ್ಮಣ ಸಭಾದ ನಟರಾಜ್ ಭಾಗವತ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಹೇಳಿದ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿತರಾದ ಇಬ್ಬರು ಹೋಮ್ ಗಾರ್ಡ್ಸ್ ಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಲೀಸರ ಪ್ರಕಾರ, ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 115 (2) (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 299 (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶ), 351 (1) (ಅಪರಾಧ ಬೆದರಿಕೆ), 352 (ಉದ್ದೇಶಪೂರ್ವಕವಾಗಿ ನಿಂದನೆ ಮತ್ತು 5 ಶಾಂತಿಗೆ ಧಕ್ಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post