ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ #Southwestern Graduate and Teachers Constituency ಮೈತ್ರಿಕೂಟದ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಕೈ ಕೋಡಿಸೋಣ ಎಂದು ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು.
ಇಲ್ಲಿನ ಜಿಲ್ಲಾ ಬಂಜಾರ ಕನ್’ವೆನ್ಶ’ನ್ ಹಾಲ್ ನಲ್ಲಿ ಶುಕ್ರವಾರ ಗ್ರಾಮಾಂತರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ಸಮಾವೇಶದಲ್ಲಿ ಮಾತನಾಡಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್’ನ ಎಸ್.ಎಲ್.ಭೋಜೇಗೌಡ ಅವರು ಸ್ಪರ್ಧಿಸಿದ್ದು, ಯಾವುದೇ ಮತಗಳು ತಿರಸ್ಕೃತಗೊಳ್ಳದಂತೆ ಮತ ಚಲಾಯಿಸುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳಿಸಿ ಕೊಡೋಣ ಎಂದರು.
Also read: ದೇಶದ ಇತಿಹಾದಲ್ಲೇ ಮೊದಲು: ಬ್ರಿಟನ್’ನಿಂದ 100 ಟನ್ ಚಿನ್ನ ಭಾರತಕ್ಕೆ ಮರಳಿ ತಂದ RBI
ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೆಗೌಡ ಮಾತನಾಡಿ, ಪದವೀಧರರ ಸಮಸ್ಯೆಗಳನ್ನು ಆಲಿಸಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ವಿಧಾನ ಪರಿಷತ್ ಸೂಕ್ತವಾದ ವೇದಿಕೆ. ಈ ನಿಟ್ಟಿನಲ್ಲಿ ಪದವೀದರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಮರ್ಥಗಳು ಸ್ಪರ್ಧೆ ಮಾಡಿದ್ದಾರೆ, ಅವರನ್ನು ಆಯ್ಕೆ ಮಾಡಿ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು, ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ಮತವನ್ನು ನೀಡಬೇಕು ಎಂದು ಮನವಿ ಮಾಡಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಈಗಾಗಲೇ ಕ್ಷೇತ್ರದ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದು, ಉತ್ತಮ ಸ್ಪಂದನೆ, ಬೆಂಬಲ ಸಿಕ್ಕಿದೆ, ಬಿಜೆಪಿಯು ಕಾರ್ಯಕರ್ತರ ಬಹುದೊಡ್ಡ ಸಂಘಟನಾ ಶಕ್ತಿಯನ್ನು ಹೊಂದಿದೆ, ಎಲ್ಲರೂ ಪ್ರಾಮಾಣಿಕವಾಗಿ ಸಕ್ರಿಯವಾಗಿದ್ದು, ಮೊದಲನೇ ಪ್ರಾಶಸ್ತ್ಯದ ಗೆಲುವು ನಮ್ಮದಾಗಲಿದೆ, ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ, ತಾಲ್ಲೂಕು ಅಧ್ಯಕ್ಷ ಸಿಂಗನಹಳ್ಳಿ ಸುರೇಶ್, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಸವರಾಜಪ್ಪ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ತಮ್ಮಡಿಹಳ್ಳಿ ನಾಗರಾಜ್, ಕೆಎಂಎಫ್ ನಿರ್ದೇಶಕರಾದ ದಿನೇಶ್ ಬುಳ್ಳಾಪುರ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ವೀರಭದ್ರಪ್ಪ ಪೂಜಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಗಣೇಶ್ ಪಿಳ್ಳಂಗಿರಿ, ಜಿಲ್ಲಾ ಉಪಾಧ್ಯಕ್ಷರಾದ ಅಣ್ಣಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷರಾದ ನಾಗರತ್ನ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರೇಮಾ ಸುಧಾಕರ್, ತಮಿಳು ಸಮಾಜದ ಮುಖಂಡ ಪೆರುಮಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್, ಮಾಜಿ ತಾಲ್ಲೂಕು ಅಧ್ಯಕ್ಷ ಭಾಗ್ಯ ಜಗದೀಶ್, ಬಿಜೆಪಿ ಯುವ ಮುಖಂಡ ವಿರೂಪಾಕ್ಷಪ್ಪ, ತಾಲ್ಲೂಕು ಖಜಾಂಚಿ ಯತೀಶ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಮರಾವ್ ಕೋರೆ, ಕೇಶವ ಶಿವಕುಮಾರ್ ಮತ್ತಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post