No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 25, 2026
in ಶಿವಮೊಗ್ಗ
0
ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಗೋವರ್ಧನ ಟ್ರಸ್ಟ್ ಶಿವಮೊಗ್ಗ ವತಿಯಿಂದ ಏ.27ರಂದು ಬೆಳಿಗ್ಗೆ 10 ಗಂಟೆಗೆ ಶುಭ ಮಂಗಳ ಸಮುದಾಯ ಭವನದಲ್ಲಿ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಗೋಶಾಲೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ ಮತ್ತು ಗೋಸೇವಾ  ಹಿತೈಷಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಗೋವರ್ಧನಾ ಅಧ್ಯಕ್ಷ ಕೆ.ಈ. ಕಾಂತೇಶ್ ಹೇಳಿದರು.

ಅವರು ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಗೋವರ್ಧನ ಟ್ರಸ್ಟ್ ಸ್ಥಾಪನೆಯಾಗಿ ಕೇವಲ 4 ತಿಂಗಳಲ್ಲಿ ಗೋವಿನ ರಕ್ಷಣೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಗರದ ಮೂರು ಗೋಶಾಲೆಗಳಿಗೆ ಹತ್ತು ಲೋಡ್‌ನಷ್ಟು ಮೇವುಗಳನ್ನು ನೀಡಿದೆ.  ಗೋವಿನ ಕುರಿತು ಜಾಗೃತಿ ಮೂಡಿಸುವುದು, ಗೋಶಾಲೆಗಳನ್ನು ನಡೆಸುತ್ತಿರುವವರಿಗೆ ಸಹಕಾರ ನೀಡುವುದು, ಗೋವುಗಳಿಗಾಗಿ ಮೇವು ಮತ್ತು ವೈದ್ಯಕೀಯ ಸವಲತ್ತು ಒದಗಿಸುವುದು, ಪೋಷಕರಿಲ್ಲದ ಬೀಡಾಡಿ ಹಸುಗಳನ್ನು ರಕ್ಷಿಸಿ ಗೋಶಾಲೆಗಳಿಗೆ ಒಪ್ಪಿಸುವುದು. ದೀಪಾವಳಿ ಸಮಯದಲ್ಲಿ ಸಾರ್ವಜನಿಕರಿಗೆ ನಗರದ ಎಲ್ಲಾ ಕಡೆ ಗೋಪೂಜೆಗೆ ವ್ಯವಸ್ಥೆ ಮಾಡುವ ಉದ್ದೇಶದಿಂದ ಈ ಗೋವರ್ಧನ ಟ್ರಸ್ಟ್ ರಚನೆಯಾಗಿದೆ ಎಂದರು.
ಏ.27ರ ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಎಸ್‌ಡಿಎಂ ಎಜುಕೇಷನ್ ಟ್ರಸ್ಟ್‌ನ ಉಪಾಧ್ಯಕ್ಷರಾದ ಶ್ರೀ ಧರ್ಮಸ್ಥಳ ಸುರೇಂದ್ರಕುಮಾರ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್. ಈಶ್ವರಪ್ಪ ವಹಿಸಲಿದ್ದಾರೆ ಎಂದರು.

ಟ್ರಸ್ಟ್‌ನ ಮಹಾಪೋಷಕರಾದ ಕೆ.ಎಸ್. ಈಶ್ವರಪ್ಪ ಮಾತನಾಡಿ, ಶೃಂಗೇರಿ ಶ್ರೀ ವಿದುಶೇಖರ ಭಾರತೀ ಸ್ವಾಮೀಜಿಗಳಿಂದ ಉದ್ಘಾಟನೆಗೊಂಡ ಈ ಟ್ರಸ್ಟ್ 5 ಸಾವಿರ ಸದಸ್ಯರನ್ನು ಹೊಂದಿದೆ. ಆದರೆ ಅವರು ಆಶೀರ್ವಾದಪೂರಕವಾಗಿ 3 ಲಕ್ಷ ರೂ. ನೀಡಿದ್ದರು.  ಜೈನಮಠದ ಶ್ರೀ ದೇವೇಂದ್ರ ಕೀರ್ತಿ ಸ್ವಾಮೀಜಿಯವರು 2 ಲಕ್ಷ ರೂ. ನೀಡಿದ್ದರು. ಈಗ ಸುರೇಂದ್ರಕುಮಾರ್ ಅವರು 5 ಲಕ್ಷ ರೂ.ಗಳ ಮಂಜೂರಾತಿ ಪತ್ರ ನೀಡಿದ್ದಾರೆ. ಈಗಾಗಲೇ 11 ಎಕರೆ ಭೂಮಿಯಲ್ಲಿ ಮೇವು ಬೆಳೆಯಲು ತೀರ್ಮಾನಿಸಲಾಗಿದೆ. 6 ಎಕರೆಯಲ್ಲಿ ಈಗಾಗಲೇ ಬೆಳೆದು ಗೋಶಾಲೆಗಳಿಗೆ ಮೇವನ್ನು ನೀಡಲಾಗಿದೆ. ರೈತರು ತಮ್ಮಲ್ಲಿ ನಿರುಪಯುಕ್ತ ಭೂಮಿ ಇದ್ದರೆ ಮೇವು ಬೆಳೆಯಲು ಗೋವರ್ಧನ ಟ್ರಸ್ಟ್‌ಗೆ ನೀಡುವಂತೆ ವಿನಂತಿಸಿದರು.

ಭೂಪಾಳಂ ಶಿವಸ್ವಾಮಿಯವರು ಬಿ.ಹೆಚ್.ರಸ್ತೆಯ ಮೂರು ಎಕರೆ ಪ್ರದೇಶವನ್ನು ಮೇವು ಬೆಳೆಯಲು ಹಾಗೂ ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷರಾದ ದಿ.ಎನ್.ಜೆ. ರಾಜಶೇಖರ್ ಅವರ ಪುತ್ರ ಕಾರ್ತೀಕ್‌ರವರು ತಮ್ಮ ಒಂದು ಎಕರೆ ಜಮೀನಿನಲ್ಲಿ ಬೆಳೆದ ಹುಲ್ಲನ್ನು ಪ್ರತೀವರ್ಷ ಗೋಶಾಲೆಗೆ ನೀಡುತ್ತೇನೆ ಎಂದು  ಭರವಸೆ ನೀಡಿದ್ದಾರೆ ಎಂದರು.
ಅಪಘಾತವಾದ ಸಂದರ್ಭದಲ್ಲಿ ದನಗಳನ್ನು ಆಸ್ಪತ್ರೆಗೆ ಸಾಗಿಸಲು ಸುಮಾರು 25 ಲಕ್ಷ ರೂ.ಗಳಲ್ಲಿ ವಿಶೇಷವಾಗಿ ನಿರ್ಮಾಣಗೊಂಡಿರುವ ಆಂಬುಲೆನ್ಸ್ ವಾಹನವನ್ನು ಆ ದಿನ ಲೋಕಾರ್ಪಣೆ ಮಾಡುತ್ತಿದ್ದೇವೆ ಎಂದರು.

ಏ.27ರಂದು ಬೆಳಿಗ್ಗೆ 12ಕ್ಕೆ ಹರಿಗೆಯಲ್ಲಿ ಮತ್ತು 12.30ಕ್ಕೆ ಗೋಂದಿಚಟ್ನಹಳ್ಳಿಯಲ್ಲಿ ಹಾಗೂ ಮಧ್ಯಾಹ್ನ 1ಕ್ಕೆ ಗಾಜನೂರಿನ ಶರಣ್ಯದಲ್ಲಿ ಒಟ್ಟು 11 ಎಕರೆಗಳಲ್ಲಿ ಗೋವಿಗಾಗಿ ಮೇವು ಬಿತ್ತನೆ ಕಾರ್ಯಕ್ರಮ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗೋವರ್ಧನ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉಮೇಶ್ ಆರಾಧ್ಯ, ಖಜಾಂಚಿ ಎಸ್.ಕೆ. ಶೇಷಾಚಲ, ಪ್ರಮುಖರಾದ ಸತ್ಯನಾರಾಯಣ್, ಉಷಾ ಅರುಣ್, ಶುಭಾ ರಾಘವೇಂದ್ರ, ಗುರುಶೇಟ್, ಯಶೋಧರ, ಹರೀಶ್ ಕಾರ್ಣೀಕ್, ಶ್ರೀಕಾಂತ್, ಶ್ಯಾಂಸುಂದರ್, ನರೇಶ್‌ಜೈನ್, ದಿನೇಶ್ ವೈಷ್ಣವ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

Next Post

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

June 5, 2026
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

June 5, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL