ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಎನ್ಇಎಸ್ ಸಂಸ್ಥೆ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳ ನೌಕರರಿಗಾಗಿ ಎ.9 ರ ಭಾನುವಾರ, ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ‘ಅಮೃತ ಕ್ರೀಡೋತ್ಸವ’ ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 9 ಗಂಟೆಯಿಂದ ಪ್ರಾರಂಭವಾಗುವ ಕ್ರೀಡೋತ್ಸವದಲ್ಲಿ ವಿವಿಧ ಶಾಲಾ ಕಾಲೇಜುಗಳಿಂದ ಪಥ ಸಂಚಲನಾ ಏರ್ಪಡಿಸಲಾಗಿದೆ. ಪುರುಷರಿಗಾಗಿ ಕ್ರಿಕೆಟ್, ಬ್ಯಾಡ್ಮಿಂಟನ್, ಟಗ್ ಆಫ್ ವಾರ್, ವಾಲಿಬಾಲ್ ಸ್ಪರ್ಧೆಗಳನ್ನು ಹಾಗೂ ಮಹಿಳೆಯರಿಗಾಗಿ ಥ್ರೋ ಬಾಲ್, ಬ್ಯಾಡ್ಮಿಂಟನ್, ಟೆನಿಕಾಯ್ಟ್, ಟಗ್ ಆಫ್ ವಾರ್ ಸ್ಪರ್ಧೆಗಳನ್ನು , ಅಥ್ಲೆಟಿಕ್ಸ್ ಸ್ಪರ್ಧೆಗಳಾದ ನೂರು ಮತ್ತು ಇನ್ನೂರು ಮಿಟರ್ ಓಟದ ಸ್ಪರ್ಧೆ, ಲಾಂಗ್ ಜಂಪ್, ಹೈ ಜಂಪ್ ಸ್ಪರ್ಧೆಗಳು ನಡೆಯಲಿದೆ. ಇದರ ಜೊತೆಯಲ್ಲಿ ಎಲ್ಲಾ ವಯೋಮಾನದವರು ಭಾಗವಹಿಸಲು ಅನುಕೂಲವಾಗುವಂತೆ ಕೆಲವು ಮನರಂಜನಾ ಆಟಗಳನ್ನು ಏರ್ಪಡಿಸಲಾಗಿದೆ.
Also read: ಕಾಂಗ್ರೆಸ್ ಕೊಡಲಿಲ್ಲ, ಆದರೆ ಬಿಜೆಪಿ ಪ್ರಶಸ್ತಿ ನೀಡಿದೆ: ಪದ್ಮಶ್ರೀ ಸ್ವೀಕರಿಸಿದ ಅಹ್ಮದ್ ಕ್ವಾದ್ರಿ
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ. ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















